ಸಚಿವ ಚಲುವರಾಯಸ್ವಾಮಿ ವಿರುದ್ದ ರಾಜ್ಯಪಾಲರಿಗೆ ಪತ್ರ : ಪೊಲೀಸ್ ತನಿಖೆಗೆ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ಅಧಿಕಾರಿಗಳು ಬರೆದದ್ದು ಎನ್ನಲಾದ ಪತ್ರದ ಬಗ್ಗೆ ತನಿಖೆ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು, ಮಂಗಳವಾರ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು.
ಪತ್ರ ಅಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ ಈ ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕಕುಮಾಕ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.
ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅವರು ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎಯಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಅದರ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಯುತ್ತಿದೆ ಎಂದರು.
ಉಡುಪಿ ವೀಡಿಯೋ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿಗೆ ವಹಿಸಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement