ಇಂದು ಸ್ಪಂದನಾ ಅಂತ್ಯಕ್ರಿಯೆ : ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು : ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಬುಧವಾರ ಅಪರಾಹ್ನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ.
ಮಂಗಳವಾರ ಮಧ್ಯರಾತ್ರಿ ಸ್ಪಂದನಾ ಅವರ ಪಾರ್ಥಿವ ಶರೀರ ಥೈಲ್ಯಾಂಡ್‌ನಿಂದ ಆಗಮಿಸಿದ್ದು, ಇಂದು ಬೆಳಿಗ್ಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ ಮನೆಯಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ.
ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್‌ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ನಿನ್ನೆ ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ದರ್ಶನ ಮುಗಿದ ಬಳಿಕ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ. ಹರಿಶ್ಚಂದ್ರ ಘಾಟ್‌ನ ಚಿತಾಗಾರದಲ್ಲಿ ಸ್ಪಂದನಾ ಅಂತ್ಯಕ್ರಿಯೆ ನಡೆಸಲು ಎರಡೂ ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಪಂದನಾ ತಮ್ಮ ಸೋದರಸಂಬಂಧಿಗಳ ಜೊತೆ ಥೈಲ್ಯಾಂಡ್‌ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ. ಸ್ಪಂದನಾ ಅವರಿಗೆ ಆಗಸ್ಟ್ 6ರಂದು ಹೃದಯಾಘಾತ ಆಯಿತು. ರಾತ್ರಿ ಮಲಗಿದವರು ಬೆಳಗ್ಗೆ ಏಳಲಿಲ್ಲ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಬಳಿಕ ಸೋಮವಾರ (ಆಗಸ್ಟ್ 7) ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement