ಧಾರವಾಡದಲ್ಲಿ ಉದ್ಯಮ ಸ್ಥಾಪನೆಗೆ ಮುಂದಾದ ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ಧಾರವಾಡ : ವಿಶ್ವವಿಖ್ಯಾತ ಸ್ಪಿನ್‌ ಬೌಲರ್‌ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಅವರು ಕ್ರಿಕೆಟ್‌ ನಿಂದ ನಿವೃತ್ತಿಯಾದ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅವರು ಧಾರವಾಡದಲ್ಲಿ ತಮ್ಮ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ.
ಶ್ರೀಲಂಕಾದಲ್ಲಿ ಈಗಾಗಲೇ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿರುವ ಮುತ್ತಯ್ಯ ಮುರಳೀಧರನ್‌, ತಂಪು ಪಾನೀಯ ಉತ್ಪಾದನೆ ಮಾಡುವ ಸಿಲೋನ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಹೊಂದಿದ್ದಾರೆ. ಈಗ ಭಾರತದಲ್ಲಿ ಉದ್ಯಮ ವಿಸ್ತರಣೆಗೆ ಮುಂದಾಗಿದ್ದಾರೆ.
ಭಾರತದಲ್ಲಿ ಸುಮಾರು 900 ಕೋಟಿ ರೂಪಾಯಿ ಹೂಡಿಕೆಗೆ ನಿರ್ಧಾರ ಮಾಡಿದ್ದಾರೆ. ಧಾರವಾಡ ತಾಲೂಕಿನ ಮುಮ್ಮಿಗಟ್ಟಿಯಲ್ಲೂ ಉತ್ಪಾದನೆ ಘಟಕ ಸ್ಥಾಪಿಸಲು ಯೋಜನೆ ರೂಪಿಸಿದ್ದು, ಧಾರವಾಡಕ್ಕೆ ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಜಾಗ ಪರಿಶೀಲಿಸಲು ಮುಮ್ಮಿಗಟ್ಟಿಗೆ ಶನಿವಾರ ಭೇಟಿ ನೀಡಿದ್ದರು. ಈ ಹಿಂದೆಯೂ ಎರಡು ಬಾರಿ ಅವರು ಭೇಟಿ ನೀಡಿದ್ದರು ಎಂದು ವರದಿಯಾಗಿದೆ.
ಎಫ್‌ಎಂಸಿಜಿ ಕ್ಲಸ್ಟರ್‌ ಅಡಿಯಲ್ಲಿ ಸುಮಾರು 900 ಕೋಟಿ ರೂ.ಗಳಷ್ಟು ಹೂಡಿಕೆ ಮಾಡಲು ಮುರಳೀಧರನ್‌ ಯೋಜಿಸಿದ್ದಾರೆ. ಮೊದಲ ಹಂತದಲ್ಲಿ 256.30 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ. ಈ ಮೂಲಕ 200 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಲಾಗಿದೆ.
ಮೊದಲ ಹಂತದಲ್ಲಿ ಕಂಪನಿ ಸ್ಥಾಪನೆಗೆ 15 ಎಕರೆ ಜಾಗ ಬೇಕಾಗಿದೆ. ತಂಪು ಪಾನೀಯ ಜತೆಗೆ ಅದರ ಕ್ಯಾನ್‌ಗಳನ್ನು ತಯಾರಿಸುವ ಘಟಕವೂ ಸ್ಥಾಪನೆಯಾಗಲಿದೆ. 7 ಬಗೆಯ ವಿವಿಧ ಗಾತ್ರದ ಅಲ್ಯೂಮಿನಿಯಂ ಕ್ಯಾನ್ ತಯಾರಾಗಲಿದೆ. ಸರ್ಕಾರ ಕಂಪನಿಗೆ ಜಾಗ ನೀಡಲು ಮುಂದಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement