ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ವೀಡಿಯೊ ಸಂವಾದದ ನಂತರ ಮಾತನಾಡಿದ ಸಚಿವರು, ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ , ಪ್ರಿಯಾಂಕಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಚಾಲನೆ ನೀಡಲಾಗುತ್ತದೆ ಎಲ್ಲಾ ಗ್ರಾಮ ಪಂಚಾಯತ, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಪ್ರತಿ ಗ್ರಾಪಂಗೆ ನೋಡೆಲ್ ಆಫಿಸರ್ಗಳ ನೇಮಕ ಮಾಡಲಾಗಿದೆ. ಪಕ್ಷಾತೀತವಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ