ಚಿಕನ್‌ ಊಟ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸಪೇಟೆ: ಕಲುಷಿತ ಆಹಾರ ಸೇವನೆಯಿಂದ 30ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಗರದಲ್ಲಿ ಗುರುವಾರ ನಡೆದ ವರದಿಯಾಗಿದೆ.
ನಗರದ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಬುಧವಾರ ರಾತ್ರಿ ಚಿಕನ್ ಊಟ ಮಾಲಾಗಿತ್ತು. ಒಟ್ಟು 148 ವಿದ್ಯಾರ್ಥಿನಿಯರಲ್ಲಿ 17 ಜನರು ಸಸ್ಯಹಾರ ಸೇವಿಸಿದ್ದು, ಇನ್ನುಳಿದವರು ಮಾಂಸಹಾರ ಸೇವಿಸಿದ್ದರು.ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ, ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ವಾಂತಿ ಬೇಧಿ ಪ್ರಾರಂಭವಾಗಿದೆ ಎಂದು ಹೇಳಲಾಗಿದೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಕೆಲವರಿಗೆ ಹಾಸ್ಟೆಲ್ ನಲ್ಲೇ ಉಪಚರಿಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ.
ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್., ಜಿ.ಪಂ ಸಿಇಒ ಸದಾಶಿವ ಪ್ರಭು ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ನಿಮ್ಮ ಕಾಮೆಂಟ್ ಬರೆಯಿರಿ

advertisement