ಚುನಾವಣಾಧಿಕಾರಿಗಳ ನೇಮಕಾತಿಗಳ ನೇಮಕಾತಿಗೆ ನೂತನ ಮಸೂದೆ : ಆಯ್ಕೆ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಲ್ಲ

ನವದೆಹಲಿ: ಇಂದು, ಗುರುವಾರ (ಆಗಸ್ಟ್‌ ೧೦) ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ.
ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿ ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ಚುನಾವಣಾ ಸಂಸ್ಥೆಗೆ ನೇಮಕಾತಿ ನಡೆಸಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ, ಈ ಪ್ರಕ್ರಿಯೆಯು ಸಂಸತ್ತು ಆಯ್ಕೆ ಪ್ರಕ್ರಿಯೆ ಕುರಿತು ಕಾನೂನನ್ನು ರಚಿಸುವವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.
ಈಗ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ ಸೇವಾ ನಿಯಮಗಳು ಮತ್ತು ಅಧಿಕಾರದ ಅವಧಿ) ಮಸೂದೆ-2023 ಅನ್ನು ರಾಜ್ಯಸಭೆಯಲ್ಲಿ ಮಂಡನೆ ಮಾಡಲು ಪಟ್ಟಿ ಮಾಡಲಾಗಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ ರಾಮ ಮೇಘವಾಲ್ ಅವರು “ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ, ಚುನಾವಣಾ ಆಯೋಗದ ವ್ಯವಹಾರದ ವಹಿವಾಟಿನ ಕಾರ್ಯವಿಧಾನ ಮತ್ತು ಅದಕ್ಕೆ ಸಂಬಂಧಿಸಿದ ಪ್ರಾಸಂಗಿಕ ವಿಷಯಗಳಿಗಾಗಿ” ಮಸೂದೆಯನ್ನು ಮಂಡಿಸಲಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ಮಸೂದೆಯನ್ನು ಟೀಕಿಸಿದೆ. ಇದು “ಪ್ರಮುಖ ಸಂಸ್ಥೆಗಳನ್ನು ನಿಯಂತ್ರಿಸುವ ಮತ್ತೊಂದು ಪ್ರಯತ್ನ” ಎಂದು ಬಣ್ಣಿಸಿದೆ.
ಮುಖ್ಯ ಚುನಾವಣಾ ಆಯುಕ್ತರನ್ನು ಶಿಫಾರಸು ಮಾಡಲು ಆಯ್ಕೆ ಸಮಿತಿಯ ಸದಸ್ಯರಾಗಿ ಸಿಜೆಐ ಬದಲಿಗೆ ಕೇಂದ್ರ ಸಂಪುಟ ಸಚಿವರನ್ನು ಪ್ರಧಾನ ಮಂತ್ರಿ ನೇಮಿಸುತ್ತಾರೆ. ವಿರೋಧ ಪಕ್ಷದ ನಾಯಕ ಸದಸ್ಯರಾಗಿರುತ್ತಾರೆ ಇದು ಸಂಸ್ಥೆಯನ್ನು ನಿಯಂತ್ರಿಸುವ ಇನ್ನೊಂದು ಮಾರ್ಗವಾಗಿದೆ. ಅದು ಸ್ವತಂತ್ರವಾಗಿರಬೇಕು” ಎಂದು ಕಾಂಗ್ರೆಸ್ ಸಂಸದೆ ಸುಶ್ಮಿತಾ ದೇವ್ ಹೇಳಿದ್ದಾರೆ.
ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಚುನಾವಣಾ ಆಯುಕ್ತರ ನೇಮಕಾತಿಯನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಸಲಹೆಯ ಮೇರೆಗೆ ಮಾಡಬೇಕು ಎಂದು ಹೇಳಿತ್ತು. ಸಂಸತ್ತು ಆಯ್ಕೆ ಪ್ರಕ್ರಿಯೆ ಕುರಿತು ಕಾನೂನನ್ನು ರಚಿಸುವವರೆಗೆ ಜಾರಿಯಲ್ಲಿರುತ್ತದೆ ಎಂದು ಅದು ಹೇಳಿತ್ತು.

ಪ್ರಮುಖ ಸುದ್ದಿ :-   ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement