ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ.
ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ.
ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಈ ಹಿಂದೆ ಕಾಂಗ್ರೆಸ್ ಮಾಡಿದಂತೆಯೇ ‘ಪೇ ಸಿಎಸ್’ ಎಂಬ ಕ್ಯೂ ಆರ್ ಕೋಡ್ ಪೋಸ್ಟರ್ ಕಾಣಿಸಿಕೊಂಡಿದೆ. “ನಮ್ಮಲ್ಲಿ ಪೇಟಿಎಂ ಕೂಡ ಲಭ್ಯವಿದೆ. ಸ್ಕ್ಯಾನ್ ಮಾಡಿ ಧಾರಾಳವಾಗಿ ಲಂಚ ಪಾವತಿ ಮಾಡಿ, ಧನ್ಯವಾದಗಳು. ಇಂತಿ ನಿಮ್ಮ ಭ್ರಷ್ಟ ಚೆಲುವರಾಯನ ಸ್ವಾಮಿ ಅಲಿಯಾಸ್ ಲಂಚ ಸ್ವಾಮಿ. #corruptcongress” ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.
ಸಚಿವ ಚೆಲುವರಾಯಸ್ವಾಮಿ ವಿರುದ್ದ ಲಂಚ ಕೇಳಿದ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರಿಗೆ ಸಚಿವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್‌ ಆದ ನಂತರ ಇದು ರಾಜಕೀಯ ತಿರುವು ಪಡೆದುಕೊಂಡಿದೆ. ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಪೇ ಸಿಎಸ್ ಅಭಿಯಾನ ಆರಂಭಿಸಲಾಗಿದೆ. ಚೆಲುವರಾಯಸ್ವಾಮಿ ಕ್ಯೂ ಆರ್ ಕೋಡ್ ಇರುವ ಪೋಸ್ಟರ್ ಕ್ರಿಯೇಟ್ ಮಾಡಿ ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಅಭಿಯಾನ ಆರಂಭಿಸಿದೆ

ಪ್ರಮುಖ ಸುದ್ದಿ :-   ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement