ಆಗಸ್ಟ್‌ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ಮಾದ್ಯಮದವರ ಜೊತೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದೆ. ಆಗ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಯಿತು. ಮಾತುಕತೆ ವೇಳೆ ಅವರು ಶೀಘ್ರವೇ ರಾಜ್ಯ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಇದಲ್ಲದೆ, ಲೋಕಸಭೆ ಚುನಾವಣೆ ತಯಾರಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಸರ್ಕಾರದ ವೈಫಲ್ಯದಗಳ ವಿರುದ್ಧ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಯಿತು. ರಾಜ್ಯ ಸರ್ಕಾರದ ಎಲ್ಲ ವೈಫಲ್ಯಗಳ ವಿರುದ್ಧ ಬೃಹತ್ ಹೋರಾಟವನ್ನು ಶೀಘ್ರವೇ ರೂಪಿಸಲಾಗುವುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement