ನಟಿ, ಮಾಜಿ ಸಂಸದೆ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ..

ಖ್ಯಾತ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ಎಗ್ಮೋರ್ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಚೆನ್ನೈನ ರಾಯಪೇಟೆಯಲ್ಲಿ ಆಕೆಯ ಒಡೆತನದ ಚಿತ್ರಮಂದಿರದ ಉದ್ಯೋಗಿಗಳು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಆಕೆಗೆ 5,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ.
ಚಿತ್ರ ಮಂದಿರದ ನೌಕರರ ಇಎಸ್‌ಐ ಪಾವತಿಸಲು ಆಡಳಿತ ಮಂಡಳಿ ವಿಫಲವಾಗಿದ್ದರಿಂದ ಸಮಸ್ಯೆ ಆರಂಭವಾಗಿದ್ದು, ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಆರಂಭದಲ್ಲಿ, ಕಾರ್ಮಿಕರೊಬ್ಬರು ತಮ್ಮ ಇಎಸ್‌ಐ ನಿಧಿ ಮೊತ್ತವನ್ನು ಪಾವತಿಸದ ರಾಜ್ಯ ವಿಮಾ ನಿಗಮದ ವಿರುದ್ಧ ದೂರು ದಾಖಲಿಸಿದರು. ಇದರ ಬೆನ್ನಲ್ಲೇ ಕಾರ್ಮಿಕ ಸರ್ಕಾರಿ ವಿಮಾ ನಿಗಮವು ನಟಿಯ ವಿರುದ್ಧ ಚೆನ್ನೈನ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಸಿಬ್ಬಂದಿಗೆ ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿದ ನಟಿ, ಪ್ರಕರಣವನ್ನು ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆದಾಗ್ಯೂ, ಕಾರ್ಮಿಕ ಸರ್ಕಾರಿ ವಿಮಾ ನಿಗಮದ ವಕೀಲರು ಆಕೆಯ ಮನವಿಯನ್ನು ವಿರೋಧಿಸಿದರು, ನಂತರ ಜಯಪ್ರದಾ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಇತರ ಮೂವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅದೇ ರೀತಿ ತಲಾ 5,000 ರೂ.ಗಳ ದಂಡ ಕಟ್ಟುವಂತೆಯೂ ತಿಳಿಸಲಾಗಿದೆ.
ಹಿಂದಿ ಚಿತ್ರರಂಗದ ಖ್ಯಾತ ತಾರೆಯಾಗಿದ್ದ ಜಯಪ್ರದಾ ಹಿಂದಿ, ತೆಲುಗು, ತಮಿಳು, ಮಲಯಾಳಂ, ಕನ್ನಡ ಭಾಷೆ ಚಿತ್ರದಲ್ಲಿ ನಟಿಸಿದ್ದಾರೆ.ಅವರು 1994 ರಲ್ಲಿ ತೆಲುಗು ದೇಶಂ ಪಕ್ಷಕ್ಕೆ (TDP) ಸೇರಿದರು. ಆಂತರಿಕ ಭಿನ್ನಾಭಿಪ್ರಾಯದಿಂದಾಗಿ ಅವರು TDP ತೊರೆದು ಸಮಾಜವಾದಿ ಪಾರ್ಟಿ ಸೇರಿದರು. ಅವರು 2004 ರಿಂದ 2014 ರವರೆಗೆ ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಅಂತಿಮವಾಗಿ, ಜಯಪ್ರದಾ 2019 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು.

ಪ್ರಮುಖ ಸುದ್ದಿ :-   ಪಹಲ್ಗಾಮ್‌ ದಾಳಿ | ಪಾಕ್ ಬೆಂಬಲಿಸಿದ್ದ ಟರ್ಕಿಗೆ ದೊಡ್ಡ ಹೊಡೆತ ನೀಡಿದ ಭಾರತ : ಸೆಲೆಬಿ ಏರ್‌ಪೋರ್ಟ್‌ ಸರ್ವೀಸಸ್‌ ಗೆ ಭದ್ರತಾ ಅನುಮತಿ ರದ್ದು...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement