ಮುನ್ನಾರಿನಲ್ಲಿ ಭೂಮಿಯಡಿಯಿಂದ ಹೊರಬಂದ ʼಮಹಾಬಲಿʼ ಕಪ್ಪೆ : ವರ್ಷಕ್ಕೆ ಒಂದು ಬಾರಿ ಮಾತ್ರ ಕಾಣಿಸಿಕೊಳ್ಳುತ್ತದೆ ಈ ಕಪ್ಪೆ….! ಏನಿದರ ವೈಶಿಷ್ಟ್ಯ..?

ಮುನ್ನಾರ್​: ವರ್ಷಕ್ಕೆ ಒಂದು ಬಾರಿ ಮಾತ್ರ ಭೂಮಿಯಿಂದ ಹೊರ ಬಂದು ಕಾಣಿಸಿಕೊಳ್ಳುವ ಮಹಾಬಲಿ ಕಪ್ಪೆ ಈಗ ಕೇರಳದ ಮುನ್ನಾರಿನಲ್ಲಿ ಮತ್ತೆ ಕಾಣಿಸಿಕೊಂಡಿದೆ..!
ಮಹಾಬಲಿ ಹೆಸರಿನ ಈ ಕಪ್ಪೆಗಳು ವರ್ಷದಲ್ಲಿ 364 ದಿನಗಳ ಕಾಲ ಭೂಮಿಯ ಒಳಗೆ ಇರುತ್ತವೆಯಂತೆ. ವರ್ಷದ ಒಂದು ದಿನ ಮಾತ್ರ ಭೂಮಿಯಿಂದ ಹೊರಬರುವ ಈ ಕಪ್ಪೆಗಳು ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್​ ಪಟ್ಟಣದ ಬಳಿ ಇರುವ ಅನಕುಲಂ, ಮಂಕುಲಂ ಪ್ರದೇಶದಲ್ಲಿ ಕಾಣಿಸಕೊಂಡಿವೆ.
ಅಳಿವಿನಂಚಿನಲ್ಲಿರುವ ಈ ಕಪ್ಪೆಗಳು ಪಶ್ಚಿಮ ಘಟ್ಟಗಳ ಬೆಚ್ಚಗಿನ ಪ್ರದೇಶಗಳಲ್ಲಿ ವಾಸಿಸುತ್ತವೆ. ಇವುಗಳ ವೈಜ್ಞಾನಿಕ ಹೆಸರು ನಾಸಿಕಬಾತ್ರಾಚಸ್ ಸಹ್ಯಡ್ರೆನ್ಸಿಸ್ ಎಂದು. ಇವುಗಳನ್ನು ಮಹಾಬಲಿ ಕಪ್ಪೆ ಎಂದೂ ಇದನ್ನು ಕರೆಯುತ್ತಾರೆ. ವರ್ಷದಲ್ಲಿ 364 ದಿನಗಳವರೆಗೆ ಈ ಕಪ್ಪೆಗಳು ಭೂಗತವಾಗಿರುತ್ತವೆ. ಮೊಟ್ಟೆಯನ್ನು ಇಡಲು ಮಾತ್ರ ವರ್ಷಕ್ಕೆ ಒಮ್ಮೆ ಮಾತ್ರ ಹೊರಗೆ ಬರುತ್ತವೆ. ಇದು ಹೊರಗಡೆ ಬಂದರೆ ಕೇರಳದ ಪಾಲಿಗೆ ಶುಭ ಸೂಚನೆ ಎಂದು ನಂಬಿಕೆ. ಇದು ಪ್ರತಿ ವರ್ಷ ಓಣಂ ಹಬ್ಬಕ್ಕೂ ಮುಂಚೆಯೇ ಇದು ಕಾಣಿಸಿಕೊಳ್ಳುತ್ತದೆ. ಈಗ ಮಹಾಬಲಿ ಕಪ್ಪೆ ಮುನ್ನಾರ್​ನಲ್ಲಿ ಕಾಣಿಸಿಕೊಂಡಿದೆ. ಓಣಂ ಹಬ್ಬ ಆಗಸ್ಟ್​ 20 ರಿಂದ ಆಗಸ್ಟ್​ 31ರ ವರೆಗೆ ನಡೆಯಲಿದೆ.
ನದಿಗಳು ಮತ್ತು ತೊರೆಗಳ ಬಳಿಯ ಮಣ್ಣಿನಲ್ಲಿ ವಾಸಿಸುತ್ತವೆ ಮತ್ತು ಎರೆಹುಳುಗಳು, ಗೆದ್ದಲುಗಳು, ಇರುವೆಗಳು ಮತ್ತು ಸಣ್ಣ ಕೀಟಗಳನ್ನು ತಿನ್ನುತ್ತವೆ. ಅರಣ್ಯ ಇಲಾಖೆಯ ಶಿಫಾರಸಿನಂತೆ ಮಹಾಬಲಿ ಕಪ್ಪೆಯನ್ನು ರಾಜ್ಯದ ಅಧಿಕೃತ ಕಪ್ಪೆ ಎಂದು ಘೋಷಿಸಲು ಕ್ರಮಕೈಗೊಳ್ಳಲಾಗಿದೆ.
ಈ ಕಪ್ಪೆಯು ಚಿಕ್ಕ ಕಾಲುಗಳನ್ನು ಹೊಂದಿದ್ದು, ಕಡು ಬಣ್ಣದಲ್ಲಿರುತ್ತದೆ. ಇದರ ದೇಹವು ಸುಮಾರು ಏಳು ಸೆಂಟಿಮೀಟರ್ ಉದ್ದವಿರುತ್ತದೆ ಮತ್ತು ಉಬ್ಬಿಕೊಂಡಿರುವಂತೆ ಕಾಣುತ್ತದೆ. ಇದರ ಮೊನಚಾದ ಮೂಗುಗಳಿಂದಾಗಿ ಹಂದಿ ಮೂತಿ ಕಪ್ಪೆ ಎಂದೂ ಕರೆಯುತ್ತಾರೆ. ದಪ್ಪ ಸ್ನಾಯುಗಳನ್ನು ಹೊಂದಿರುವ ಸಣ್ಣ ಕಾಲುಗಳು ಮತ್ತು ತೋಳುಗಳು ಮಣ್ಣಿನಲ್ಲಿ ಅಗೆಯಲು ಸಹಾಯ ಮಾಡುತ್ತದೆ. ಆದರೆ, ಅದರ ಹಿಂಗಾಲುಗಳು ಚಿಕ್ಕದಾಗಿರುವ ಕಾರಣ, ಇತರ ಕಪ್ಪೆಗಳಂತೆ ಇದು ಜಿಗಿಯುವುದಿಲ್ಲ.

ಪ್ರಮುಖ ಸುದ್ದಿ :-   ಸೇನೆ ಬರ್ಲಿ ನೋಡ್ಕೊಳ್ತೇನೆ..; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌...

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement