ಚಿಕ್ಕಮಗಳೂರು : ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ ಅವರ ವಿರುದ್ಧ ಸ್ಟೇಟಸ್ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.
ಕಡೂರು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ ಲತಾ ಎಂಬವರು ಅಮಾನತಾಗಿದ್ದಾರೆ ಎಂದು ವರದಿಯಾಗಿದೆ. ಕಡೂರು ಶಾಸಕ ಆನಂದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮಹಿಳಾ ಕಾನ್ಸ್ಟೇಬಲ್ ಲತಾ ಅವರು, ನನಗೆ ಏನಾದರೂ ತೊಂದರೆಯಾದರೆ ಕಡೂರು ಶಾಸಕರೇ ಕಾರಣ. ಕಡೂರು ಶಾಸಕರಿಗೆ ನನ್ನ ಧಿಕ್ಕಾರ ಎಂದು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಉಲ್ಲೇಖಿಸಿದ್ದರು. . ಇದಕ್ಕೆ ಸಂಬಂಧಿಸಿದ ಸ್ಕ್ರೀನ್ಶಾಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ. ಶಾಸಕ ಆನಂದ ಅವರ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಮಹಿಳಾ ಕಾನ್ಸ್ ಟೇಬಲ್ ಲತಾರನ್ನ ಅಮಾನತು ಮಾಡಿ ಚಿಕ್ಕಮಗಳೂರು ಎಸ್ಪಿ ಆದೇಶ ಹೊರಡಿಸಿದ್ದಾರೆ.
ಕಡೂರಿನಿಂದ ತರೀಕೆರೆಗೆ ಲತಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅವರು ಅಸಮಾಧಾನ ಹೊರಹಾಕಿದ್ದರು. ಮಹಿಳಾ ಪೇದೆಯನ್ನ ಅಮಾನತು ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ