ನಟ ಉಪೇಂದ್ರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಟ, ರಿಯಲ್​ ಸ್ಟಾರ್​ ಉಪೇಂದ್ರ ವಿರುದ್ಧ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾತಿ ನಿಂದನೆ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ನಟ ಉಪೇಂದ್ರ ಅವರು ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಯೊಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಇದೀಗ ನಿರ್ದಿಷ್ಟ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿದೆ ಎನ್ನಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಂದ ದೂರು ಸ್ವೀಕರಿಸಿದ ಪೊಲೀಸರು, ನಟನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಪ್ರಕರಣ ದಾಖಲಾಗಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪವನ್ನ ಉಪೇಂದ್ರ ಅವರು ಎದುರಿಸುತ್ತಿದ್ದಾರೆ. ಉಪೇಂದ್ರ ಫೇಸ್ಬುಕ್ ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಉಲ್ಲೇಖಿಸಿ ಮಾತನಾಡಿದ್ದರು ಎಂದು ಹೇಳಲಾಗಿದೆ. ಉಪೇಂದ್ರ ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ತಕ್ಷಣವೇ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದಾರೆ. ಬಾಯಿ ತಪ್ಪಿನಿಂದ ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗಳು ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲಿಟ್ ಮಾಡಿದ್ದೇನೆ. ನನ್ನ ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement