ಅಕ್ಟೋಬರ್‌ ನಲ್ಲಿ ಬೆಳಗಾವಿಯಿಂದ ದೆಹಲಿ, ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ: ಈರಣ್ಣ ಕಡಾಡಿ

ಬೆಳಗಾವಿ : ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ಟೋಬರ್ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ದೆಹಲಿ ಬೆಳಗಾವಿ ನಡುವೆ ಅಕ್ಟೋಬರ್‌ 1ರಿಂದ ಪ್ರತಿದಿನ ವಿಮಾನಯಾನ ಸೇವೆಯನ್ನು ಪ್ರಾರಂಭಿಸಲು ಒಪ್ಪಿದೆ ಎಂದು ತಿಳಿಸಿದ್ದಾರೆ.ಇದಲ್ಲದೆ, ಅಕ್ಟೋಬರ್‌ 29ರಿಂದ ಸ್ಟಾರ್ ಏರ್‌ಲೈನ್ಸ್ ಸಂಸ್ಥೆಯು ಪುಣೆ-ಬೆಳಗಾವಿ ನಡುವೆ ಪ್ರತಿದಿನ ವಿಮಾನ ಸಂಚಾರ ಸೇವೆ ಪ್ರಾರಂಭಿಸಲಿದೆ. ಅಕ್ಟೋಬರ್‌ 31 ರಿಂದ ಪುಣೆ-ಬೆಳಗಾವಿ ನಡುವೆ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ವಾರದಲ್ಲಿ 3 ದಿನ ( ಮಂಗಳವಾರ, ಗುರುವಾರ ಮತ್ತು ಶನಿವಾರ) ವಿಮಾನ ಸಂಚಾರ ಪ್ರಾರಂಭಿಸಲಿದೆ.

ಬೆಳಗಾವಿಯಿಂದ ದೆಹಲಿ ಹಾಗೂ ಪುಣೆ ನಗರಗಳಿಗೆ ವಿಮಾನಯಾನ ಸೇವೆ ಪ್ರಾರಂಭಿಸಿರುವ ಇಂಡಿಗೋ ಮತ್ತು ಸ್ಟಾರ್ ಏರ್‌ಲೈನ್ಸ್ ಸಂಸ್ಥೆಗಳಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement