ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಪಡಿಸಲಾಗುವುದು. ಎನ್‌ಇಪಿ(NEP)ಯನ್ನು ರದ್ದು ಮಾಡುವ ಮಾಡುವ ಮೊದಲು ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕೆ ಸಮಯಾವಕಾಶ ಇರಲಿಲ್ಲ. ಸರ್ಕಾರ ರಚನೆಯಾದಾಗ, ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು. ಒಮ್ಮೆಲೇ ಎನ್‌ಇಪಿ ರದ್ದುಪಡಿಸಿದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಈ ಶೈಕ್ಷಣಿಕ ವರ್ಷದಲ್ಲಿ ಎನ್‌ಇಪಿ ಮುಂದುವರಿಸಲಾಗುವುದು. ಎನ್‌ಇಪಿಗೆ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಮತ್ತು ಉಪನ್ಯಾಸಕರಿಂದ ತೀವ್ರ ವಿರೋಧವಿದೆ ಎಂದರು
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮಾತನಾಡಿ, ರಾಜ್ಯದಲ್ಲಿ ಎನ್‌ಇಪಿಯನ್ನು ಕಾಂಗ್ರೆಸ್ ಜಾರಿಗೆ ತರುವುದಿಲ್ಲ ಎಂದು ಘೋಷಿಸಿತ್ತು. ಬದಲಾಗಿ ಸರ್ಕಾರವೇ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಿದೆ ಎಂದರು.
ಎನ್‌ಇಪಿ ಕುರಿತು ವಿಸ್ತೃತ ಚರ್ಚೆ ನಡೆಯಬೇಕಿತ್ತು.ನಾನು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದೇನೆ. ನನಗೆ ಎನ್‌ಇಪಿ ಅರ್ಥವಾಗುತ್ತಿಲ್ಲ. ಎರಡು ಅಥವಾ ಮೂರು ಬಾರಿ ಅಧ್ಯಯನ ಮಾಡಲು ಮತ್ತು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ, ಆದರೆ ವಿಫಲನಾದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿದರೂ ಎನ್‌ಇಪಿಯ ಸಾರವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ ಎಂದುಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ