ಮುರ್ಡೇಶ್ವರ : ಸಮುದ್ರಕ್ಕೆ ಇಳಿದಿದ್ದ ಯುವಕ ನಾಪತ್ತೆ, ಮತ್ತೋರ್ವನ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಈಜಲು ಹೋಗಿ ಪ್ರವಾಸಿಗನೊಬ್ಬ ನಾಪತ್ತೆಯಾಗಿದ್ದು. ಇನ್ನೋರ್ವನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ತುಮಕೂರು ಮೂಲದ 22 ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಇದ್ದರೂ ಸಮುದ್ರಕ್ಕಿಳಿದಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದು ಅದರಲ್ಲಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.
ತುಮಕೂರು ಮೂಲದ ಮಣಿತೇಜಾ(21) ಸುಮ್ರದದ ಅಲೆಯ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾದ ಯುವಕ ಎಂದು ಹೇಳಲಾಗಿದೆ. ಆತನ ಪತ್ತೆಗೆ ಕಾರಯಾಚರಣೆ ನಡೆಯುತ್ತಿದೆ. ಮತ್ತೊಬ್ಬ ಯುವಕ ಯಶ (22) ಎಂಬಾತನನ್ನು ರಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ.

4.2 / 5. 5

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement