ಎರಡು ಬಾರಿ ನೀಟ್‌ ಪರೀಕೆಯಲ್ಲಿ ಅನುತ್ತೀರ್ಣನಾದ ನಂತರ ಆತ್ಮಹತ್ಯೆ ಮಾಡಿಕೊಂಡ ಯುವಕ : ನಂತರ ತಂದೆಯೂ ಆತ್ಮಹತ್ಯೆ

ಚೆನ್ನೈ: ಚೆನ್ನೈನಲ್ಲಿ 19 ವರ್ಷದ ವೈದ್ಯಕೀಯ ಸೀಟ್‌ ಆಕಾಂಕ್ಷಿಯೊಬ್ಬ ಎರಡು ಬಾರಿ ಪ್ರಯತ್ನದಲ್ಲಿ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಆತ ಸತ್ತಿದ್ದಾನೆ ಎಂದು ಘೋಷಿಸಲಾಯಿತು.
ನಗರದ ಕ್ರೋಮ್‌ಪೇಟೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಜಗದೀಶ್ವರನ್ ಎಂದು ಗುರುತಿಸಲಾಗಿದೆ.
ಸಂತ್ರಸ್ತ ಎರಡು ಪ್ರಯತ್ನಗಳಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ನಲ್ಲಿ ಅಗತ್ಯ ಅಂಕಗಳನ್ನು ಗಳಿಸಲು ವಿಫಲನಾದ ನಂತರ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದಿದ್ದರೂ, ಆತನ ತಂದೆ ಸೆಲ್ವಶೇಖರ್ ತಮ್ಮ ಮಗನ ಸಾವಿಗೆ ನೀಟ್ ಪರೀಕ್ಷೆಯನ್ನು ದೂಷಿಸಿದ್ದಾರೆ. ಅಲ್ಲದೆ, ಸೋಮವಾರ ಸೆಲ್ವಶೇಖರ್ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ. ಸಾಯುವ ಮುನ್ನ, ತಮಿಳುನಾಡಿನಲ್ಲಿ ನೀಟ್‌ ಪರೀಕ್ಷೆ ತೆಗೆದುಹಾಕಲು ಪ್ರತಿಭಟಿಸಲು ಸಿದ್ಧ ಎಂದು ಸೆಲ್ವಶೇಖರ್ ಹೇಳಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳದಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

 

N

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement