ಇವರು ವಾರಾಣಸಿಯಿಂದ ಸ್ಪರ್ಧಿಸಿದರೆ…. ಪ್ರಧಾನಿ ಮೋದಿ ಸೋಲುವುದು ಗ್ಯಾರಂಟಿ : ಸಂಜಯ ರಾವತ್‌

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಾಣಸಿಯಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ ರಾವತ್ ಹೇಳಿದ್ದಾರೆ.
ವಾರಾಣಸಿಯವರಿಗೆ ಪ್ರಿಯಾಂಕಾ ಗಾಂಧಿ ಬೇಕು. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ. ರಾಯ್‌ಬರೇಲಿ, ವಾರಾಣಸಿ ಮತ್ತು ಅಮೇಠಿ ಹೋರಾಟ ಬಿಜೆಪಿಗೆ ಕಠಿಣವಾಗಿದೆ ಎಂದು ರಾವತ್ ಹೇಳಿದ್ದಾರೆ.
ಶರದ ಪವಾರ್ ಮತ್ತು ಅಜಿತ್ ಪವಾರ್ ಬಗ್ಗೆ ಮಾತನಾಡಿದ ಅವರು, ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯವಾದರೆ, ಶರದ್ ಪವಾರ್ ಮತ್ತು ಅಜಿತ್ ಪವಾರ್ ಏಕೆ ಭೇಟಿಯಾಗಬಾರದು? ಎಂದು ಪ್ರಶ್ನಿಸಿದ್ದಾರೆ.
ಶರದ್ ಪವಾರ್ ಮತ್ತು ಅಜಿತ್ ಪವಾರ್ ಭೇಟಿಯ ಊಹಾಪೋಹಗಳ ಬಗ್ಗೆ ಮಾತನಾಡಿದ ಶಿವಸೇನಾ (ಯುಬಿಟಿ) ನಾಯಕ, “ನವಾಜ್ ಷರೀಫ್ ಮತ್ತು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಬಹುದಾದರೆ, ಶರದ್ ಪವಾರ್ ಮತ್ತು ಅಜಿತ್ ಪವಾರ್ ಏಕೆ ಭೇಟಿಯಾಗಬಾರದು?ಶರದ್ ಪವಾರ್ ಮತ್ತು ಅಜಿತ್ ಪವಾರ್ ನಿನ್ನೆ ಭೇಟಿಯಾದರು ಎಂಬುದು ನಮಗೆ ನಮಗೆ ಮಾಧ್ಯಮಗಳಿಂದ ತಿಳಿದಿದೆ. ಶರದ್ ಪವಾರ್ ಶೀಘ್ರದಲ್ಲೇ ಅದರ ಬಗ್ಗೆ ಮಾತನಾಡುತ್ತಾರೆ. ಶರದ್ ಪವಾರ್ ಅವರು ಅಜಿತ್ ಪವಾರ್ ಅವರನ್ನು ʼಇಂಡಿಯಾʼ ಒಕ್ಕೂಟದ ಸಭೆಗೆ ಆಹ್ವಾನಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮಹಾರಾಷ್ಟ್ರದ ಇಬ್ಬರೂ ಉಪ ಮುಖ್ಯಮಂತ್ರಿಗಳು ಸಹ ಈ ಪ್ರಸ್ತುತ ಸರ್ಕಾರದ ಬಗ್ಗೆ ಸಂತೋಷವಾಗಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಅಜಿತ ಪವಾರ್, ದೇವೇಂದ್ರ ಫಡ್ನವಿಸ್ ಮತ್ತು ಮಹಾರಾಷ್ಟ್ರದ ಜನರು ಈ ಪ್ರಸ್ತುತ ಸರ್ಕಾರದಿಂದ ಸಂತೋಷವಾಗಿಲ್ಲ” ಎಂದು ಅವರು ಹೇಳಿದರು.
ಭಾನುವಾರ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಅಜಿತ್ ಪವಾರ್ ಅವರೊಂದಿಗಿನ ‘ರಹಸ್ಯ ಸಭೆ’ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೊಬ್ಬರ ನಿವಾಸದಲ್ಲಿ ಸಭೆ ನಡೆದಾಗ ಅದು ಹೇಗೆ ರಹಸ್ಯವಾಯಿತು ಎಂದು ಹೇಳಿದರು.
ತನ್ನ ಸಹೋದರನ ಮಗನನ್ನು ಭೇಟಿ ಮಾಡುವುದರಲ್ಲಿ ಏನು ತಪ್ಪಿದೆ? ಅದು ಯಾರೊಬ್ಬರ ನಿವಾಸದಲ್ಲಿ ನಡೆದಾಗ ಅದು ಹೇಗೆ ರಹಸ್ಯವಾಗುತ್ತದೆ. ನಾನು ಅವರ ನಿವಾಸದಲ್ಲಿದ್ದೆ” ಎಂದು ಅವರು ಹೇಳಿದರು.
ಎಂಟು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕರೊಂದಿಗೆ ಶರದ್ ಪವಾರ್ ಅವರ ಸಹೋದರನ ಮಗ ಅಜಿತ್ ಪವಾರ್ ಅವರು ಇತ್ತೀಚೆಗೆ ಬಿಜೆಪಿ-ಶಿವಸೇನೆ (ಏಕನಾಥ್ ಶಿಂಧೆ) ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಯಾದರು. ಅಜಿತ್ ಪವಾರ್ ನಂತರ ಎನ್‌ಸಿಪಿಯ ಹಲವಾರು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡರು. ನಂತರ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮುಖ ಸುದ್ದಿ :-   ಮಧ್ಯಂತರ ಜಾಮೀನು ಸಿಕ್ಕರೂ ಕೇಜ್ರಿವಾಲ್‌ ದೆಹಲಿ ಸಿಎಂ ಕಚೇರಿಗೆ ಹೋಗುವಂತಿಲ್ಲ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement