ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಮಾತನಾಡುವಾಗ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ’ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶಕುಮಾರ ಉಪೇಂದ್ರ ವಿರುದ್ಧ ದೂರು ನೀಡಿದ್ದಾರೆ. ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಬೈರಪ್ಪ ಹರೀಶಕುಮಾರ ಎಂಬವರು ಉಪೇಂದ್ರ ವಿರುದ್ಧ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ದೂರು ಆಧರಿಸಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ 3(1)(ಆರ್)(ಎಸ್) ಅಡಿ ಎಫ್ಐಆರ್ ದಾಖಲಾಗಿದೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಉಪೇಂದ್ರ ಅವರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದ್ದರು. ತಾನು ಹೇಳಿದ್ದು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಟ ಉಪೇಂದ್ರ ಕ್ಷಮೆ ಕೇಳಿದ್ದರು
ನಿಮ್ಮ ಕಾಮೆಂಟ್ ಬರೆಯಿರಿ