ಕುಮಟಾ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಹೊರಟ ಶಿಕ್ಷಕ ಅಪಘಾತದಲ್ಲಿ ಸಾವು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಗುಡೆ ಅಂಗಡಿಯ ಪ್ರಾಥಮಿಕ ಶಾಲಾ ಶಿಕ್ಷಕ ಗೋಪಾಲ ಪಟಗಾರ (50) ಅಪಘಾತದಲ್ಲಿ ನಿಧನರಾಗಿದ್ದಾರೆ.
ಆಗಸ್ಟ್‌ ೧೫ರಂದು ಮುಂಜಾನೆ 7 ಗಂಟೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಗುಡೆ ಅಂಗಡಿ ಶಾಲೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಘನಾಶನಿ ರಸ್ತೆಯ ಹಳಕಾರ ತಿರುವಿನ ಸಮೀಪ ಬೊಲೆರೊ ವಾಹನ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಾಸಕ್ಕೆ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾದ ಶಿಕ್ಷಕ ಗೋಪಾಲ ಪಟಗಾರ ಅವರು ಗಂಭೀರವಾಗಿ ಗಾಯಗೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಮಟಾ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದು ಅಘನಾಶಿನಿ ರಸ್ತೆಯಲ್ಲಿರುವ ಸಿಸಿಟಿವಿಯನ್ನು ಪರಿಶೀಲಿಸಲಾಗುತ್ತಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿ ಎಸ್.ಐ. ನವೀನ ನಾಯ್ಕ ತನಿಖೆ ಕೈಗೊಂಡಿದ್ದಾರೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement