ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಎರಡನೇ ಪ್ರತಿನಿಧಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಹುಕ್ಕೇರಿ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.
ಈ ಹಿಂದೆ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಹುಕ್ಕೇರಿಯವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಹಿರಿತನಕ್ಕೆ ಹಾಗೂ ಅನುಭವಕ್ಕೆ ಮಾನ್ಯತೆ ನೀಡಿ ತಮ್ಮ ನೇತೃತ್ವದ ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಅಲ್ಲದೆ, ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ ಗೌಡ ಅವರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕಾತಿ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ