ವಿರೋಧದ ನಡುವೆ ವಿಧಾನ ಪರಿಷತ್‌ ನಾಮನಿರ್ದೇಶನಕ್ಕೆ ನಟಿ ಉಮಾಶ್ರೀ ಸೇರಿ ಮೂವರ ಹೆಸರು ಅಂತಿಮ

ಬೆಂಗಳೂರು : ವಿಧಾನಪರಿಷತ್​ಗೆ ಮೂವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಇದಕ್ಕೆ ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ರಾಜ್ಯಪಾಲರಿಗೆ ನಾಮನಿರ್ದೇಶನ ಹೆಸರುಗಳ ಪಟ್ಟಿಯನ್ನು ಶೀಘ್ರವೇ ರಾಜ್ಯಪಾಲರಿಗೆ ಪಟ್ಟಿ ರವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ನಟಿ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇನ್ನು ಕಾಂಗ್ರೆಸ್​ ಪಕ್ಷದ ಕೆಲವು ನಾಯಕರ ವಿರೋಧದ ನಡುವೆಯೂ ಎಂ.ಆರ್. ಸೀತಾರಾಮ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ ದಾಸ್ ಅವರ ಹೆಸರನ್ನೂ ನಾಮನಿರ್ದೇಶನ ಪಟ್ಟಿಯಲ್ಲಿ ಸೇರಿಸಲಾಗಿದೆ.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ ಹಾಗೂ ಸಮಾಜಸೇವೆ ಕೋಟಾದಡಿ ನಿವೃತ್ತ ಇ.ಡಿ. ಅಧಿಕಾರಿ ಸುಧಾಮ ದಾಸ್​ ಅವರನ್ನು ನಾಮನಿರ್ದೇಶನ ಮಾಡಲು ಹೆಸರು ಅಂತಿಮಗೊಳಿಸಲಾಗಿದೆ. ನಾಮನಿರ್ದೇಶನ ಕುರಿತು ಸಿದ್ದರಾಮಯ್ಯ ಅವರು ನಿನ್ನೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಎಂ..ಆರ್‌.ಸೀತಾರಾಮ ಮತ್ತು ಸುಧಾಮ್ ದಾಸ ಆಯ್ಕೆಗೆ ವಿರೋಧ ವ್ಯಕ್ತವಾಗಿದ್ದರಿಂದ ಆಕಾಂಕ್ಷಿಗಳನ್ನು ಸಂಪರ್ಕಿಸಿ ಸಮಾಧಾನ ಪಡಿಸಲು ನಾಯಕರು ಪ್ರಯತ್ನಿಸಿದ್ದಾರೆ. ಅಲ್ಲದೆ ಇವರಿಬ್ಬರ​​ ನಾಮನಿರ್ದೇಶನ ವಿರೋಧಿಸಿ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಹೀಗಾಗಿ ರಾಜ್ಯಪಾಲರು ಸರ್ಕಾರದಿಂದ ಸ್ಪಷ್ಟನೆ ಕೋರಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement