ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ : ಗೋಲ್ಡನ್‌ ಸ್ಟಾರ್‌ ಗಣೇಶಗೆ ಅರಣ್ಯ ಇಲಾಖೆಯಿಂದ ನೋಟಿಸ್

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸೂಕ್ಷ್ಮ ವಲಯದಲ್ಲಿ ಬೃಹತ್ ಕಟ್ಟಡ ನಿರ್ಮಿಸುತ್ತಿರವು ನಟ ಗಣೇಶ ಅವರಿಗೆ ಅರಣ್ಯ ಇಲಾಖೆ ನೋಟೀಸ್ ನೀಡಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದ ಸರ್ವೆ ನಂಬರ್ 105ರಲ್ಲಿ ಗಣೇಶ್‌ ಅವರು 1 ಎಕರೆ 24 ಗುಂಟೆ ಜಮೀನು ಹೊಂದಿದ್ದಾರೆ. ಮನೆ ಹಾಗೂ ತೋಟಗಾರಿಕೆ ಉದ್ದೇಶಕ್ಕೆ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಬಂಡೀಪುರ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿಯಿಂದ ಅನುಮತಿ ಪಡೆದಿದ್ದರು. ಆದರೆ, ಅವರು ಬೃಹತ್‌ ಕಟ್ಟಡ ನಿರ್ಮಿಸಲು ಸಿದ್ಧತೆ ಮಾಡಿಕೊಂಡಿದ್ದರು. ದೊಡ್ಡ ಕಾಂಕ್ರೀಟ್‌ ಪಿಲ್ಲರ್‌ಗಳನ್ನು ಜಮೀನಿನಲ್ಲಿ ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ‘ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇಲ್ಲ. ಹೀಗಾಗಿ ಅವರಿಗೆ ನಿರ್ಮಾಣ ಸ್ಥಗಿತಗೊಳಿಸುವಂತೆ ಸೂಚಿಸಿ ನೋಟಿಸ್‌ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಗಣೇಶ ನಿರ್ಮಿಸುತ್ತಿರುವುದು ಶಾಶ್ವತ ಕಟ್ಟಡ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದು’ ಎಂದು ಪರಿಸರವಾದಿಗಳು ಆಗ್ರಹಿಸಿದ್ದರು. ಈ ಸಂಬಂಧ‌, ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರು ಬಂಡೀಪುರ ಹುಲಿ ಯೋಜನೆ ನಿರ್ದೇಶಕಗೆ ವರದಿ ಸಲ್ಲಿಸಿದ್ದರು ಅದರ ಆಧಾರದಲ್ಲಿ ನಿರ್ದೇಶಕರು ಗಣೇಶ ಅವರಿಗೆ ನೋಟಿಸ್‌ ಜಾರಿಯಾಗಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement