ಮಹಿಳೆಯರ ಉಚಿತ ಬಸ್‌ ಪ್ರಯಾಣ ಸ್ಥಗಿತಗೊಳ್ಳಲ್ಲ, ಇದಕ್ಕೆ ನಾನೇ ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಯಾವ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಮಹಿಳೆಯರ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕೊನೆಯಾಗುತ್ತದೆ ಎಂಬ ಊಹಾಪೋಹ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಂದ ಉಂಟಾದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಮಹಿಳೆಯರ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕೊನೆಯಾಗುತ್ತದೆ ಎಂದು ಶಕ್ತಿ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಟ್ವೀಟ್‌ ನಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಉಚಿತ ಬಸ್‌ ಪ್ರಯಾಣ ರದ್ದು ಮಾಡಿದೆ. ಮಹಿಳೆಯರ ಉಚಿತ ಬಸ್‌ ಪ್ರಯಾಣ ಆಗಸ್ಟ್‌ 15ಕ್ಕೆ ಕೊನೆಯಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್‌ ವೈರಲ್‌ ಆಗಿದ್ದವು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕೆಎಸ್‌ಆರ್‌ಟಿಸಿಯವರು ಸ್ಪಷ್ಟನೆ ನೀಡಿದ್ದರು.

ಪ್ರಮುಖ ಸುದ್ದಿ :-   ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement