2ನೇ ಎಫ್‌ಐಆರ್‌; ನಟ ಉಪೇಂದ್ರಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಚಿತ್ರನಟ ಉಪೇಂದ್ರ ವಿರುದ್ಧದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎರಡನೇ ಎಫ್ಐಆರ್ ರದ್ದು ಕೋರಿ ನಟ, ನಿರ್ದೇಶಕ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2ನೇ ಎಫ್‌ಐಆರ್‌ಗೂ ಸಹ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೇರಿ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ಎಫ್‌ಐಆರ್‌ ದಾಖಲಾಗಿತ್ತು.

 

 

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement