ಶೇ. 40% ಕಮಿಷನ್ ಆರೋಪ ಪ್ರಕರಣ: ತನಿಖೆಗೆ ಜಸ್ಟಿಸ್ ನಾಗಮೋಹನ ದಾಸ್ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್‌ ನೀಡುವಾಗ 40% ಕಮಿಷನ್‌ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿರುವ ಕುರಿತು ತನಿಖೆ ಮಾಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.
ತನಿಖಾ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೋರಡಿಸಿರುವ ಸರ್ಕಾರ, “ಕಾಮಗಾರಿಗಳ ಟೆಂಡರ್‌, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು. ಸಂಪೂರ್ಣ ವರದಿಯನ್ನು 30 ದಿನಗಳ ಒಳಗೆ ಸಲ್ಲಿಸಬೇಕು ಎಂದು ಹೇಳಿದೆ.
ತನಿಖೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನೆರವು ನೀಡಬೇಕು. ತನಿಖಾ ಸಮಿತಿ ಕೇಳುವ ಅಗತ್ಯ ದಾಖಲೆಗಳು, ಮಾಹಿತಿಗಳು, ಕಡತಗಳನ್ನು ಅಧಿಕಾರಿಗಳು ಒದಗಿಸಬೇಕು. ಸಮಿತಿಯು ತನಿಖೆಗಾಗಿ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೇಮಿಸಿಕೊಳ್ಳಬಹುದು” ಎಂದು ಹೇಳಿದೆ.
ಟೆಂಡರ್‌ ಪ್ರಕ್ರಿಯೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಮತ್ತು ದೂರುಗಳು ಬಂದಿದ್ದರೂ, ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ಆಗಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಜಾರಿಗೊಳಿಸುವ ಉದ್ದೇಶದಿಂದ ತನಿಖಾ ಸಮಿತಿ ರಚಿಸಲಾಗಿದೆ” ಎಂದು ಆದೇಶದಲ್ಲಿ ಹೇಳಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement