ಕೇರಳದ ಕಣ್ಣೂರಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ : ಹಂದಿಗಳನ್ನು ಕೊಲ್ಲಲು ಜಿಲ್ಲಾಡಳಿತ ಆದೇಶ

ಕಣ್ಣೂರು: ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗುತ್ತಿದ್ದಂತೆ ಅಲ್ಲಿನ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಎರಡು ಫಾರ್ಮ್‌ ಗಳಲ್ಲಿ ಇರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಆಫ್ರಿಕನ್‌ ಹಂದಿ ಜ್ವರ ಕಣ್ಣೂರು ಜಿಲ್ಲೆಯ ಮಲೆಯಂಪಾಡಿಯಲ್ಲಿರುವ ಖಾಸಗಿ ಫಾರ್ಮ್‌ ಗಳಲ್ಲಿ ಪತ್ತೆಯಾಗಿದೆ ಎಂದು ಜಿಲ್ಲಾ ಪಶುಸಂಗೋಪನಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಂದಿ ಸಾಕಾಣೆ ಕೇಂದ್ರದ ಒಂದು ಕಿಲೋ ಮೀಟರ್‌ ವ್ಯಾಪ್ತಿಯ ಪ್ರದೇಶವನ್ನು ಸೋಂಕು ಪತ್ತೆಯಾದ ಸ್ಥಳವೆಂದು ಘೋಷಿಸಲಾಗಿದೆ. ಹಾಗೂ 10 ಕಿಲೋ ಮೀಟರ್‌ ವ್ಯಾಪ್ತಿವರೆಗಿನ ಪ್ರದೇಶವನ್ನು ಕಣ್ಗಾವಲು ವಲಯ ಎಂದು ಘೋಷಿಸಲಾಗಿದೆ.
10 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿರುವ ಎರಡು ಫಾರ್ಮ್‌ ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಶಿಷ್ಟಾಚಾರದ ನಿಯಮದಂತೆ ಆ ಹಂದಿಗಳನ್ನು ಹೂಳಲು ಸೂಚನೆ ನೀಡಲಾಗಿದೆ. ಅಲ್ಲದೆ, ಈ ಪ್ರದೇಶದಲ್ಲಿನ ಹಂದಿಗಳ ಮಾರಾಟ ಮತ್ತು ಸಾಗಾಟವನ್ನು ಮೂರು ತಿಂಗಳ ಕಾಲದವರೆಗೆ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಫಾರ್ಮ್‌ ಗಳಲ್ಲಿ ಸೋಂಕಿಗೆ ಒಳಗಾಗಿರುವ ಹಂದಿಗಳನ್ನು ಬೇರೆ ಫಾರ್ಮ್‌ ಗಳಿಂದ ಖರೀದಿಸಲಾಗಿತ್ತೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement