ಬೆಂಗಳೂರು : ಉದ್ಯಾನ ಎಕ್ಸ್ ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು : ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ರೈಲಿನ ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ಇದುವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 7:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಪ್ಲಾಟ್‌ಫಾರ್ಮ್‌ಗೆ ದಟ್ಟ ಹೊಗೆ ಆವರಿಸಿದೆ. ಎರಡು ಬೋಗಿಗಳಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
“ಉದ್ಯಾನ ಎಕ್ಸ್‌ಪ್ರೆಸ್‌ನಲ್ಲಿ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಿದ ನಂತರ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ರೈಲಿನಿಂದ ಇಳಿದ 2 ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ. ಅಗ್ನಿಶಾಮಕ ಇಂಜಿನ್‌ಗಳು ಮತ್ತು ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement