ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮತ್ತೆ ಜೋರಾಗುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು ಆಗಸ್ಟ್​ 20ರ ನಂತರ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್​ 20ರ ನಂತರ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement