ಬೆಂಗಳೂರು: ಕಾಂಗ್ರೆಸ್ಸಿನಿಂದ ವಿಧಾನ ಪರಿಷತ್ತಿಗೆ ಸುಧಾಮ ದಾಸ್ ಅವರ ನಾಮನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಹಿರಿಯ ನಟಿ ಉಮಾ ಶ್ರೀ, ಎಂ.ಆರ್. ಸೀತಾರಾಮ ಹಾಗೂ ಸುಧಾಮ ದಾಸ್ ಅವರ ಹೆಸರನ್ನ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಆದರೆ ಈಗ ಸುಧಾಮ ದಾಸ್ ನಾಮ ನಿರ್ದೇಶನಕ್ಕೆ ಮಾಡುವುದಕ್ಕೆ ಕಾಂಗ್ರೆಸ್ಸಿನಲ್ಲಿ ವಿರೋಧ ವ್ಯಕ್ತವಾಗಿದೆ. ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ, ಹೆಚ್.ಸಿ ಮಹದೇವಪ್ಪ, ಆರ್.ಬಿ ತಿಮ್ಮಾಪುರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಸುಧಾಮ ದಾಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು. ಹೀಗಾಗಿ ಅವರು ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಪಕ್ಷಕ್ಕೆ ಅವರ ಕೊಡುಗೆ ಬಹುತೇಕ ‘ಶೂನ್ಯ’ ಎಂದು ಪತ್ರದಲ್ಲಿ ಹೇಳಲಾಗಿದೆ.
ಪಕ್ಷದಲ್ಲಿ ಮೂವತ್ತು ವರ್ಷಗಳಿಂದ ದುಡಿದ ಹಿರಿಯ ನಾಯಕರಿದ್ದಾರೆ. ಅವರನ್ನು ಪರಿಗಣಿಸಬೇಕು. ಎಂಎಲ್‌ಸಿ ಸ್ಥಾನಕ್ಕೆ ಪಕ್ಷಕ್ಕೆ ಇತ್ತೀಚಿಗೆ ಬಂದಂತಹ ವ್ಯಕ್ತಿಗಳನ್ನು ಪರಿಗಣಿಸಬಾರದು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ