ಪಾಕಿಸ್ತಾನದಲ್ಲಿ ಉಗ್ರರಿಂದ ಬಾಂಬ್ ದಾಳಿ : 11 ಕಾರ್ಮಿಕರು ಸಾವು

ಪಾಕಿಸ್ತಾನದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಖೈಬರ್ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಬಾಂಬ್‌ ಸೋಟಕ್ಕೆ 11 ಕಾರ್ಮಿಕರು ಸಾವಿಗೀಡಾಗಿದ್ದಾರೆ.
ಸ್ಫೋಟದ ತೀವ್ರತೆಗೆ ಬಳಿಕ ದೇಹಗಳು ಛಿದ್ರವಾಗಿ ಬಿದ್ದಿವೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನಿರ್ಮಾಣ ಹಂತದ ಸರ್ಕಾರಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ 11 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರ್ಮಿಕರನ್ನ ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಟಾರ್ಗೆಟ್ ಮಾಡಿ ಉಗ್ರರು ದಾಳಿ ಮಾಡಿದ್ದಾರೆ. ಶಾವಾಲ್ ತೆಹಸಿಲ್‌ನ ಗುಲ್ ಮೀರ್ ಕೋಟ್ ಬಳಿ ಕಾರ್ಮಿಕರು ಇದ್ದ ವಾಹನ ಹೋಗುತ್ತಿತ್ತು. ಆಗ ದಿಢೀರ್ ವಾಹನ ಸ್ಫೋಟವಾಗಿದೆ.
ಹೊಟ್ಟೆಪಾಡಿಗೆ ಬಂದವರು ಜೀವ ಕಳೆದುಕೊಂಡರು ಅವರೆಲ್ಲಾ ಕೂಲಿ ಕಾರ್ಮಿಕರು, ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳಲು ಕೆಲಸಕ್ಕೆ ಬಂದು ಜೀವ ಕಾರ್ಮಿಕರಲ್ಲಿ ಕೆಲವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಆದರೆ ಈ ಸ್ಫೋಟ ನಡೆಸಿದವರು ಯಾರು ಎಂಬುದು ಇನ್ನೂ ದೃಢಪಟ್ಟಿಲ್ಲ.
ಕೆಲದಿನಗಳ ಹಿಂದೆ ಖೈಬರ್ ಪಖ್ತುಂಖ್ವಾ ಭಾಗದಲ್ಲಿ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯ ವೇಳೆ ಆತ್ಮಹತ್ಯಾ ಬಾಂಬರ್ ತನ್ನನ್ನೇ ಸ್ಫೋಟಿಸಿಕೊಂಡಿದ್ದ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಮೃತಪಟ್ಟು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಜೆಯುಐಎಫ್ ನಾಯಕ ಮೌಲಾನಾ ಜಿಯಾವುಲ್ಲಾ ಜಾನ್ ಹಾಗೂ ಕೆಲ ಪತ್ರಕರ್ತರು ಅಸುನೀಗಿದ್ದರು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಸ್ಫೋಟ ಸಂಭವಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement