ಮತ್ತೆ ಮುಂಗಾರು ಚುರುಕು: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.
ಭಾನುವಾರ ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಆಗಸ್ಟ್‌ 20ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ ಹಾಗೂ ಗಾಳಿಯು 30ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್‌ 21 ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಒಳನಾಡಿನಲ್ಲಿ ಸಾಧಾರಣವಾಗಿರಲಿದೆ ಎಂದು ಇಲಾಖೆ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement