ಏಷ್ಯಾಕಪ್‌-2023 : 17 ಆಟಗಾರರ ಭಾರತದ ಕ್ರಿಕೆಟ್‌ ತಂಡ ಪ್ರಕಟ

ನವದೆಹಲಿ: ಏಕದಿನ ಕ್ರಿಕೆಟ್‌ ಏಷ್ಯಾಕಪ್‌-2023ಕ್ಕಾಗಿ ಭಾರತ 17 ಮಂದಿಯ ತಂಡವನ್ನು ಪ್ರಕಟಿಸಲಾಗಿದೆ. ಗಾಐದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಬ್ಯಾಟರುಗಳಾದ ಕೆ.ಎಲ್. ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ತಿಲಕ್ ವರ್ಮಾ ಮೊದಲ ಬಾರಿಗೆ ಭಾರತದ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತ ತನ್ನ 17 ಸದಸ್ಯರ ಪ್ರವಾಸಿ ತಂಡವನ್ನು ಸೋಮವಾರ ಪ್ರಕಟಿಸಿತು, ನಂತರ ದೆಹಲಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ ಯಾದವ್, ತಿಲಕ್ ವರ್ಮಾ, ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement