ಹೊಳೆಹೊನ್ನೂರು : ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

ಶಿವಮೊಗ್ಗ: ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸರ್ಕಲ್ ನಲ್ಲಿ 18 ವರ್ಷದ ಹಿಂದೆ ಸ್ಥಾಪಿಸಲ್ಪಟ್ಟಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ತಡರಾತ್ರಿ ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕಿಡಿಗೇಡಿಗಳ ಬಂಧನಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಶಾಸಕಿ ಶಾರದಾ ಪೂರ್ಯಾನಾಯ್ಕ, ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿದ್ದಾರೆ.
ಹೊಳೆಹೊನ್ನೂರು ಪಟ್ಟಣದ ಸರ್ಕಲ್ ನಲ್ಲಿ ಕಳೆದ 18 ವರ್ಷದ ಹಿಂದೆ ಸ್ಥಳೀಯ ಯುವಕರು ಗಾಂಧಿ ಪ್ರತಿಮೆ ನಿರ್ಮಾಣ ಮಾಡಿ ಗಾಂಧಿ ಸರ್ಕಲ್ ಎಂಬ ಹೆಸರು ಕೂಡ ಇಟ್ಟಿದ್ದರು. ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಸಂಪೂರ್ಣ ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಹೊಳೆಹೊನ್ನೂರು ಗ್ರಾಮಸ್ಥರಿಗೆ ಪ್ರತಿಮೆ ಧ್ವಂಸವಾಗಿರುವುದು ಗೊತ್ತಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಶಿವಮೊಗ್ಗ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಈ ನಡುವೆ ಸ್ಥಳಕ್ಕೆ ಆಗಮಿಸಿದ ಹೊಳೆಹೊನ್ನೂರು ಪೊಲೀಸರು ಸಿಸಿ ಕ್ಯಾಮೆರಾ ಗಳನ್ನು ಸಹ ಪರಿಶೀಲಿಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರ ತಂಡ ಹಾಗೂ ಶ್ವಾನದಳ ಪರಿಶೀಲನೆ ನಡೆಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement