ಐಜ್ವಾಲ್ : ಮಿಜಿರಾಂ ರಾಜಧಾನಿ ಐಜ್ವಾಲ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಸೈರಾಂಗ್ ಪ್ರದೇಶದ ಬಳಿ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿದ ನಂತರ ಕನಿಷ್ಠ 17 ಕಾರ್ಮಿಕರು ಮೃತಪಟ್ಟಿದ್ದಾರೆ ವರದಿಯಾಗಿದ್ದು, ಹಲವರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಘಟನೆಯ ಸಮಯದಲ್ಲಿ ಐಜ್ವಾಲ್ ವರೆಗೆ ರೈಲ್ವೆ ಸಂಪರ್ಕ ತರಲು ನಿರ್ಮಿಸಲಾಗುತ್ತಿರುವ ಸೇತುವೆಯ ಮೇಲೆ 40 ನಿರ್ಮಾಣ ಕಾರ್ಮಿಕರಿದ್ದರು.
ಈವರೆಗೆ ಹದಿನೇಳು ಶವಗಳನ್ನು ಅವಶೇಷಗಳಿಂದ ವಶಕ್ಕೆ ಪಡೆಯಲಾಗಿದೆ… ಇನ್ನೂ ಅನೇಕರು ನಾಪತ್ತೆಯಾಗಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಂಗ್ ಮಿಜೋ ಅಸೋಸಿಯೇಶನ್‌ನ ಸೈರಾಂಗ್ ಶಾಖೆಯು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಈಶಾನ್ಯ ಪ್ರದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುವ ಭಾರತೀಯ ರೈಲ್ವೆ ಯೋಜನೆಯ ಭಾಗವಾಗಿದ್ದ ಈ ಕುಸಿದ ಸೇತುವೆ ಕೆಲವು ವರ್ಷಗಳಿಂದ ನಿರ್ಮಾಣ ಹಂತದಲ್ಲಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದ ಹಿಂದಿನ ಕಾರಣ ಮತ್ತು ಅದು ಸಂಭವಿಸಿದಾಗ ಎಷ್ಟು ಜನರು ಅದರಲ್ಲಿದ್ದರು ಎಂದು ನಾವು ಖಚಿತಪಡಿಸಿಲ್ಲ ”ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ (ಎನ್‌ಎಫ್‌ಆರ್) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸವ್ಯಸಾಚಿ ಡಿ ಹೇಳಿದರು.
ಮಿಜೋರಾಂ ಮುಖ್ಯಮಂತ್ರಿ ಝೋರಮ್‌ತಂಗ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ (ಹಿಂದಿನ ಟ್ವಿಟರ್) ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು “ಐಜ್ವಾಲ್ ಬಳಿಯ ಸಾಯಿರಂಗ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ; ಕನಿಷ್ಠ 15 ಕಾರ್ಮಿಕರು ಸಾವಿಗೀಡಾಗಿದ್ದಾರೆ, ರಕ್ಷಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಎಲ್ಲಾ ದುಃಖಿತ ಕುಟುಂಬಗಳಿಗೆ ನಾನು ನನ್ನ ತೀವ್ರವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ