ಬಾಕು : ಅಝರ್ಬೈಜಾನ್ನಲ್ಲಿ ನಡೆದ ಆರ್. ಪ್ರಗ್ಯಾನಂದ ಹಾಗೂ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವಣ ಫಿಡೆ ಚೆಸ್ ವಿಶ್ವಕಪ್ ಫೈನಲ್ನ 2ನೇ ಗೇಮ್ ಕೂಡ ಡ್ರಾನಲ್ಲಿ ಅಂತ್ಯಗೊಂಡಿದೆ.
ಇವರಿಬ್ಬರ ಮೊದಲ ಪಂದ್ಯ ಕೂಡ ಡ್ರಾ ಆಗಿತ್ತು. ಈಗ ಫೈನಲ್ ಪಂದ್ಯದ 2ನೇ ಕ್ಲಾಸಿಕ್ ಗೇಮ್ ಕೂಡ ಸಮಬಲದೊಂದಿಗೆ ಅಂತ್ಯವಾಗಿದೆ. ಹೀಗಾಗಿ ಬುಧವಾರ ನಡೆಯಲಿರುವ ಟೈಬ್ರೇಕರ್ ಪಂದ್ಯದ ಮೂಲಕ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ.
ಬುಧವಾರ ನಡೆದ 2ನೇ ಗೇಮ್ನಲ್ಲಿ ಕಪ್ಪು ಕಾಯಿಗಳೊಂದಿಗೆ ಚದುರಂಗ ಚಲನೆ ಆರಂಭಿಸಿದ್ದ ಪ್ರಗ್ಯಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ಕಾರ್ಲ್‌ಸೆನ್ ಜಾಣ ಚಲನೆಗೆ ಅತ್ಯುತ್ತಮ ಚೆಕ್ ನಡೆಗಳ ಮೂಲಕ ಪ್ರಗ್ಯಾನಂದ ಕೌಂಟರ್ ನೀಡಿದ್ದರು. ಪರಿಣಾಮ 22 ನಡೆಗಳ ನಂತರ ಕೂಡ ಪಂದ್ಯವು ಸಮತೋಲಿತವಾಗಿತ್ತು.
ಈ ಸಮಬಲವನ್ನು ಕಾಯ್ದುಕೊಳ್ಳುವಲ್ಲಿ ಇಬ್ಬರು ಆಟಗಾರರು ಯಶಸ್ವಿಯಾದರು. ಅಲ್ಲದೆ 30 ನಡೆಗಳ ನಂತರ ಪಂದ್ಯವನ್ನು ಡ್ರಾಗೊಳಿಸಲು ನಿರ್ಧರಿಸಿದರು. ಇದರೊಂದಿಗೆ 2 ಕ್ಲಾಸಿಕ್ ಗೇಮ್ಗಳು 1-1 ಅಂತರದಿಂದ ಸಮಬಲವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ