ಚಂದ್ರಯಾನ-3 ಯಶಸ್ವಿ : ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದಿಸಿದ್ದಾರೆ.
ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಸಚಿವ ಎಸ್. ಬೋಸರಾಜು ಸಹ ಆಗಮಿಸಿದ್ದರು.
ಚಂದ್ರಯಾನ -3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಅಧ್ಯಕ್ಷ ಸೋಮನಾಥ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಅಭಿನಂದನೆ ಸಲ್ಲಿಸಿದ್ದರು.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement