ಬೆಂಗಳೂರು : ಕಾಂಗ್ರೆಸ್‌ ಸೇರಿದ ಆಯನೂರು ಮಂಜುನಾಥ

ಬೆಂಗಳೂರು : ವಿಧಾನ ಪರಿಷತ್‌ನ ಮಾಜಿ ಸದಸ್ಯ ಆಯನೂರು ಮಂಜುನಾಥ ಅವರು ಜೆಡಿಎಸ್ ತೊರೆದು ಇಂದು ಗುರುವಾರ ಕಾಂಗ್ರೆಸ್‌ ಸೇರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಭಾನುವಾರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದ ನಂತರ ಆಯನೂರು ಮಂಜುನಾಥ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿತ್ತು. ನಂತರ ಶಿವಮೊಗ್ಗದಲ್ಲಿ ಮಾತನಾಡಿದ್ದ ಅವರು, ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಸೇರಬೇಕಾಗಿತ್ತು. ಆದರೆ ಸಾಧ್ಯವಾಗದ ಕಾರಣ ನಾನು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದೆ. ಈಗ ಕಾಂಗ್ರೆಸ್ ಸೇರಲು ಸ್ಥಳೀಯ ಶಾಸಕರು, ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳ ಒಪ್ಪಿಗೆ ಸಿಕ್ಕಿದೆ ಎಂದು ಹೇಳಿದ್ದರು.

ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ ಬಿಜೆಪಿಯಿಂದ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ವಿಧಾನ ಪರಿಷತ್‌ ಅವಧಿ ಇನ್ನೂ ಉಳಿದಿರುವಾಗಲೇ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪರಿಷತ್ ಸದಸ್ಯತ್ವ, ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಅವರು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು.
ಜೆಡಿಎಸ್ ಮಂಜುನಾಥ ಅವರನ್ನು ಶಿವಮೊಗ್ಗ ನಗರದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅವರು 8,863 ಮತಗಳನ್ನು ಪಡೆದಿದ್ದರು. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ 96,490 ಮತಗಳನ್ನು ಪಡೆದು ಗೆಲುವು ಕಂಡರು. ಕಾಂಗ್ರೆಸ್‌ನ ಹೆಚ್‌. ಸಿ. ಯೋಗೇಶ್ 68,816 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.

ಪ್ರಮುಖ ಸುದ್ದಿ :-   ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement