ಅಂಕೋಲಾ : ಗಂಗಾವಳಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ, ಸ್ಥಳೀಯರಿಗೆ ಆತಂಕ | ವೀಕ್ಷಿಸಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಸೇತುವೆ ಬಳಿ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಇದು ಸುಮಾರು 7 ಅಡಿಗಳಷ್ಟು ಉದ್ದವಿರುವ ಬೃಹತ್ ಮೊಸಳೆ ಎನ್ನಲಾಗಿದೆ. ಮೊಸಳೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಅವರು ಹೆಚ್ಚಾಗಿ ನದಿಯನ್ನು ಅವಲಂಬಿಸಿರುವುದರಿಂದ ಅವರಿಗೆ ಆತಂಕ ಎದುರಾಗಿದೆ.

ನದಿ ತೀರದಲ್ಲಿ ಹೆಚ್ಚಾಗಿ ಕೃಷಿ ಚಟುವಟಿಕೆಗಳು ನಡೆಯುತ್ತದೆ. ಹೀಗಾಗಿ ನೀರು ಹಾಗೂ ಮತ್ತಿತರ ಕೆಲಸಗಳಿಗಾಗಿ ಜನರು ನದಿ ತೀರಕ್ಕೆ ಬರುತ್ತಿರುತ್ತಾರೆ. ಗಂಗಾವಳಿ ನದಿಯಲ್ಲಿ ಮೀನುಗಾರಿಕೆಯೂ ಹೇರಳವಾಗಿ ನಡೆಯುತ್ತದೆ. ಹೀಗಾಗಿ ಮೊಸಳೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ ಹಾಗೂ ನದಿ ತೀರಕ್ಕೆ ತೆರಳಲು ಭಯಪಡುತ್ತಿದ್ದಾರೆ. ಸದ್ಯ ಮೊಸಳೆ ಕಾಣಿಸಿಕೊಂಡ ಹಿನ್ನೆಲೆ ನದಿ ಪಾತ್ರದ ನಿವಾಸಿಗಳಿಗೆ ಎಚ್ಚರದಿಂದಿರಲು ಸೂಚಿಸಲಾಗಿದೆ.

ಐದಾರು ತಿಂಗಳ ಹಿಂದೆ ಗಂಗಾವಳಿ ನದಿಯಲ್ಲಿ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿತ್ತು. ಈಗ ಮತ್ತೆ ಅದೇ ಮೊಸಳೆ ಹೊಸಕಂಬಿ ಬಳಿ ಕಾಣಿಸಿಕೊಂಡಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೊಸಕಂಬಿ, ಹಿಲ್ಲೂರು, ಕುಂಟಕಣಿ ಸೇರಿದಂತೆ ಸುತ್ತಲಿನ ಗ್ರಾಮಗಳ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದ್ದು, ಮೊಸಳೆ ಹಿಡಿದು ಬೇರೆಡೆ ಸಾಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement