ಪ್ರಧಾನಿ ಪದವಿ ಮಾನನಷ್ಟ ಪ್ರಕರಣ : ದೆಹಲಿ ಸಿಎಂಅರವಿಂದ್ ಕೇಜ್ರಿವಾಲಗೆ ಸುಪ್ರೀಂ ಕೋರ್ಟಿನಲ್ಲಿ ಸಿಗದ ರಿಲೀಫ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತು ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಆರ್‌ಟಿಐ ಕಾಯ್ದೆಯಡಿ ಮೋದಿಯ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಮಾಹಿತಿ ಆಯುಕ್ತರ ಆದೇಶವನ್ನು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದ ನಂತರ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಕೇಜ್ರಿವಾಲ್ ಮತ್ತು ಎಎಪಿ ನಾಯಕ ಸಂಜಯ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣವು ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ ಮತ್ತು ಆಗಸ್ಟ್ 29 ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿರುವುದರಿಂದ ಅರ್ಜಿಯ ಕುರಿತು ನೋಟಿಸ್ ನೀಡುತ್ತಿಲ್ಲ ಎಂದು ಹೇಳಿದೆ.
ಹಾಗೂ ಗುಜರಾತ್ ವಿಶ್ವವಿದ್ಯಾನಿಲಯ ಮತ್ತು ಕೇಜ್ರಿವಾಲ್ ತಮ್ಮ ದೂರುಗಳನ್ನು ಹೈಕೋರ್ಟ್‌ನಲ್ಲಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ.
ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ತಡೆ ನೀಡುವಂತೆ ಕೋರಿ ಕೇಜ್ರಿವಾಲ್ ಮತ್ತು ಸಂಜಯ ಸಿಂಗ್ ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಆಗಸ್ಟ್ 11ರಂದು ತಿರಸ್ಕರಿಸಿತ್ತು.
ಪ್ರಧಾನಿ ಮೋದಿಯವರ ಪದವಿಗೆ ಸಂಬಂಧಿಸಿದಂತೆ ಅವರ “ವ್ಯಂಗ್ಯ” ಮತ್ತು “ಅವಹೇಳನಕಾರಿ” ಹೇಳಿಕೆಗಳ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಮೆಟ್ರೋಪಾಲಿಟನ್ ನ್ಯಾಯಾಲಯವು ಈ ಹಿಂದೆ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ನೀಡಿತ್ತು. ಈ ಪ್ರಕರಣವನ್ನು ಆಗಸ್ಟ್ 31 ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement