ಮಳೆ ಕೊರತೆ ; 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ : ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಅಣೆಕಟ್ಟೆಗಳು, ಕೆರೆಗಳು ನೀರಿಲ್ಲ ಸ್ಥಿತಿಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೋಡಬಿತ್ತನೆ ಬಗ್ಗೆ ಸರ್ಕಾರ ಯಾವುದೇ ಚಿಂತನೆ ನಡೆಸಿಲ್ಲ, ಈ ಮೊದಲು ಮೋಡ ಬಿತ್ತನೆ ಮಾಡಿದಾಗ ಉತ್ತಮ ಫಲಿತಾಂಶ ಬಂದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಬರದ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇದೆ. ಆದರೆ ಬರಗಾಲ ಎಂದು ಘೋಷಿಸಲು ಹಲವು ಮಾರ್ಗಸೂಚಿ ಪಾಲಿಸಬೇಕಾಗಿದೆ, ಕೆಲವು ಮಾರ್ಗಸೂಚಿ ಅಡ್ಡಿಯಾಗುತ್ತಿರುವ ಕಾರಣ ಘೋಷಿಸಲು ಆಗುತ್ತಿಲ್ಲ ಎಂದು ತಿಳಿಸಿದರು.
1.43 ಲಕ್ಷ ಹೆಕ್ಟೇರ್‌ ಹತ್ತಿ ಕೊರತೆ ಇದೆ. 1.8 ಲಕ್ಷ ಹೆಕ್ಟೇರ್‌ ತೊಗರಿ ಕೊರತೆ ಇದೆ ಎಂದ ಅವರು, ಪ್ರತಿ ತಾಲೂಕಿನ 10 ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಹೀಗಾಗಿ ನೋಡಲ್ ಅಧಿಕಾರಿಗಳನ್ನ ನೇಮಿಸಲಾಗಿದೆ. ಪ್ರತಿ ಜಿಲ್ಲೆಗೂ ನೋಡಲ್ ಅಧಿಕಾರಿ ಭೇಟಿ ನೀಡಲಿದ್ದಾರೆ. ನಾನೂ ಕೂಡ ಜಿಲ್ಲಾವಾರು ಭೇಟಿ ಮಾಡುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement