ವ್ಲಾದಿಮಿರ್‌ ಪುತಿನ್ ನವದೆಹಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಖುದ್ದು ಭಾಗವಹಿಸಲು ಯೋಜಿಸಿಲ್ಲ: ರಷ್ಯಾ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಮುಂಬರುವ G20 ಶೃಂಗಸಭೆಯಲ್ಲಿ ಖುದ್ದು ಭಾಗವಹಿಸಲು ಯೋಜಿಸಿಲ್ಲ ಎಂದು ಕ್ರೆಮ್ಲಿನ್ ಶುಕ್ರವಾರ ತಿಳಿಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪುತಿನ್ ಭಾಗವಹಿಸುವಿಕೆಯ ಸ್ವರೂಪವನ್ನು ನಂತರ ನಿರ್ಧರಿಸಲಾಗುವುದು ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾದ ಅಧ್ಯಕ್ಷರ ವಿರುದ್ಧ ಯುದ್ಧ ಅಪರಾಧಗಳ ಆರೋಪದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ಐಸಿಸಿ) ಅವರ ವಿರುದ್ಧ ವಾರಂಟ್ ಹೊರಡಿಸಿದ ನಂತರ ಪುತುನ್ ವಿದೇಶಕ್ಕೆ ಪ್ರಯಾಣಿಸುವಾಗ ಬಂಧನದ ಅಪಾಯವನ್ನು ಎದುರಿಸುತ್ತಾರೆ.

ಪುತಿನ್ ಅವರು ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಬ್ರಿಕ್ಸ್ ಶೃಂಗಸಭೆಯಲ್ಲಿಯೂ ವೀಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದರು. ಅವರನ್ನು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಪ್ರತಿನಿಧಿಸಿದರು.
ಭಾರತವು ಪ್ರಸ್ತುತ ಆವೃತ್ತಿಯ G20 ಶೃಂಗಸಭೆಯನ್ನು ಆಯೋಜಿಸುತ್ತಿದೆ ಮತ್ತು ಮುಖ್ಯ ಕಾರ್ಯಕ್ರಮವು ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ನಡೆಯಲಿದೆ. ಶೃಂಗಸಭೆಯಲ್ಲಿ 29 ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್‌ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ರಾಷ್ಟ್ರಗಳು ಮತ್ತು 14 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸುವ ಸಾಧ್ಯತೆಯಿದೆ. ನವದೆಹಲಿಯ ಶೃಂಗಸಭೆಯ ಸಮಾರೋಪದಲ್ಲಿ ಜಿ20 ನಾಯಕರ ಘೋಷಣೆಯನ್ನು ಅಂಗೀಕರಿಸಲಾಗುತ್ತದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement