ಬೆಂಗಳೂರು : ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದ್ದಾರೆ.
ಪ್ರಧಾನಿ ಮೋದಿ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಶನಿವಾರ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ ಅವರು ಉಡುಗೊರೆಯಾಗಿ ನೀಡಿದ್ದಾರೆ. ಆಗಸ್ಟ್ 23 ರಂದು ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈ ಚಿತ್ರವನ್ನು ತೆಗೆದಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ