ಚಂದ್ರಯಾನ-3 ಮಿಷನ್‌ : 3 ಉದ್ದೇಶಗಳಲ್ಲಿ ಎರಡನ್ನು ಸಾಧಿಸಲಾಗಿದೆ, ಮೂರನೇ ಉದ್ದೇಶದ ಪ್ರಯೋಗಗಳು ನಡೆಯುತ್ತಿವೆ ; ಇಸ್ರೋ

ಬೆಂಗಳೂರು : ಚಂದ್ರಯಾನ-3 ಮಿಷನ್ ಮೂರು ಉದ್ದೇಶಗಳಲ್ಲಿ ಎರಡನ್ನು ಸಾಧಿಸಲಾಗಿದೆ ಮತ್ತು ಮೂರನೇ ಉದ್ದೇಶದ ವೈಜ್ಞಾನಿಕ ಪ್ರಯೋಗಗಳು ನಡೆಯುತ್ತಿವೆ ಎಂದು ಶನಿವಾರ ಇಸ್ರೋ ಹೇಳಿದೆ.
ಇಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯು ಚಂದ್ರಯಾನ-3 ಮಿಷನ್‌ನ ಎಲ್ಲಾ ಪೇಲೋಡ್‌ಗಳು ಸಮಪರ್ಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೋ ಹೇಳಿದೆ.
“ಚಂದ್ರಯಾನ-3 ಮಿಷನ್: ಕಾರ್ಯಾಚರಣೆಯ 3 ಉದ್ದೇಶಗಳಲ್ಲಿ, ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್‌ ಸಾಧಿಸಲಾಗಿದೆ. ಚಂದ್ರನ ಮೇಲೆ ರೋವರ್ ಲ್ಯಾಂಡರಿನಿಂದ ಹೊರಬರುವುದನ್ನು ಸಾಧಿಸಲಾಗಿದೆ. ಸ್ಥಳದಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಎಲ್ಲಾ ಪೇಲೋಡ್ಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೋ ‘X’ ನಲ್ಲಿ ಟ್ವೀಟ್‌ ಮಾಡಿದೆ.

ಭಾರತವು ಬುಧವಾರ, ಇಸ್ರೋದ ಮಹತ್ವಾಕಾಂಕ್ಷೆಯ ಮೂರನೇ ಚಂದ್ರನ ಮಿಷನ್ ಚಂದ್ರಯಾನ-3ರ ಲ್ಯಾಂಡರ್ ವಿಕ್ರಂ (LM) ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಮೇಲೆ ಯಶಸ್ವಿಯಾಗಿ ಇಳಿದಿದೆ. ಭಾರತದ ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಿದೆ ಮತ್ತು ಈವರೆಗೆ ಅಜ್ಞಾತವಾಗಿದ್ದ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದ ಮೊದಲನೇ ದೇಶವಾಗಿದೆ.

ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಸ್ಥಳವನ್ನು “ಶಿವಶಕ್ತಿ ಪಾಯಿಂಟ್” ಎಂದು ಹೆಸರಿಸುವ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ ಮತ್ತು 2019 ರಲ್ಲಿ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ -2 ಲ್ಯಾಂಡರ್ ಕ್ರ್ಯಾಶ್-ಲ್ಯಾಂಡ್ ಆದ ಸ್ಥಳವನ್ನು “ತಿರಂಗಾ ಪಾಯಿಂಟ್ ಎಂದು ಕರೆಯಲಾಗುವುದು ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಚಂದ್ರಯಾನ-3 ಲ್ಯಾಂಡರ್ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲಾಗುವುದು ಎಂದು ಮೋದಿ ಪ್ರಕಟಿಸಿದ್ದಾರೆ.

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ವಿವಾದ ; ಮಲಿವಾಲ್‌ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ, ಪ್ರಶ್ನೆಗೆ ಉತ್ತರಿಸದೆ ಮೈಕ್‌ ಮತ್ತೊಬ್ಬರಿಗೆ ಕೊಟ್ಟ ಕೇಜ್ರಿವಾಲ್

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement