ಜೈಲಿನಲ್ಲಿ ಈಜುಕೊಳ ಬೇಕೆನ್ನುತ್ತಿದ್ದಾರೆ ಸತ್ಯೇಂದ್ರ ಜೈನ್: ಸುಪ್ರೀಂ ಕೋರ್ಟಿಗೆ ಇ.ಡಿ ಮಾಹಿತಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿಯ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಣೆ ಮಾಡಲು ಜಾರಿ ನಿರ್ದೇಶನಾಲಯ (ಇ.ಡಿ.) ವಿರೋಧ ವ್ಯಕ್ತಪಡಿಸಿದೆ.
ಸತ್ಯೇಂದ್ರ ಜೈನ್ ಅವರು ಜೈಲಿನ ಆವರಣದಲ್ಲಿ ಈಜು ಕೊಳ ಬೇಕೆಂದು ಕೇಳುತ್ತಿದ್ದಾರೆ ಎಂದು ಅದು ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದೆ.
ಜೈನ್ ಅವರ ವೈದ್ಯಕೀಯ ಸಲಹೆಯನ್ನು ಉಲ್ಲೇಖಿಸಿ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವಂತೆ ವಕೀಲ ಅಭಿಷೇಕ ಮನು ಸಿಂಘ್ವಿ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಸತ್ಯೇಂದ್ರ ಜೈನ್ ಅವರು ಬೆನ್ನುಹುರಿ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಕೆಲವು ಬಹುಮುಖ್ಯ ಚಿಕಿತ್ಸೆಗಳಿಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನನ್ನು ವಿಸ್ತರಿಸಬೇಕು ಎಂದು ಸಿಂಘ್ವಿ ಕೋರಿದ್ದಾರೆ.
ಆದರೆ ಮಧ್ಯಂತರ ಜಾಮೀನು ವಿಸ್ತರಿಸಲು ವೈದ್ಯರ ಸಲಹೆ ಸಾಲುವುದಿಲ್ಲ ಎಂದು ಪ್ರತಿಪಾದಿಸಿದ ಜಾರಿ ನಿರ್ದೇಶನಾಲಯ, ಜಾಮೀನು ವಿಸ್ತರಣೆ ಮಾಡುವಂತೆ ಕೋರಿದ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. “ಅವರು ಜೈಲಿನಲ್ಲಿ ಈಜುಕೊಳ ಬಯಸಿದ್ದಾರೆ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ತಿಳಿಸಿದರು.
ಜೈನ್ ಅವರನ್ನು ಏಮ್ಸ್ ವೈದ್ಯರ ತಂಡ ಸ್ವತಂತ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ ರಾಜು, ಅಗತ್ಯಬಿದ್ದರೆ, ಜೈನ್ ಅವರಿಗೆ ಫಿಸಿಯೋ ಥೆರಪಿ ನೀಡಲು ಅವರು ಈಜುಕೊಳಕ್ಕೆ ಕರೆದೊಯ್ಯಬಹುದು ಎಂದರು.
ಬಳಿಕ ಜೈನ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸೆಪ್ಟೆಂಬರ್ 1ರವರೆಗೂ ವಿಸ್ತರಿಸಲು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂ.ಎಂ. ಸುಂದರೇಶ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ ಒಪ್ಪಿಕೊಂಡಿತು.

ಪ್ರಮುಖ ಸುದ್ದಿ :-   ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement