ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ

ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಹಾಸನದಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ. 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ನೀಡಲಾಗುತ್ತದೆ ಎಂದು ತಿಳಿಸಿದರು.
ಬ್ಯಾಂಕ್ ಖಾತೆ ಇಲ್ಲದ ಕಾರಣಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಅವರಲ್ಲಿ ಸುಮಾರು ಏಳು ಲಕ್ಷ ಜನರು ಬ್ಯಾಂಕ್‌ ಕಾತೆ ತೆರೆದ ಕಾರಣ ಅವರಿಗೆ ನೀಡಲಾಗಿದೆ. ಉಳಿದವರಿಗೂ ಈ ಬಗ್ಗೆಯೂ ಕೂಡ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ. ಯಾರು ಕಾರ್ಡ್‌ ಪಡೆಯಲು ಅರ್ಹರಿರುತ್ತಾರೋ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಎಲ್ಲವನ್ನೂ ಪರಿಶೀಲನೆ ಮಾಡಿ ಅಕ್ಕಿ ವಿತರಣೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ತಿಳಿಸಿದರು.
ಕಾರು ಇರುವವರಿಗೆ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ಹಿಂದಿನ ಸರ್ಕಾರ ತೀರ್ಮಾನ ಮಾಡಿತ್ತು. ಈ ಬಗ್ಗೆ ಕಾಂಗ್ರೆಸ್‌ ಹೊಸದಾಗಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement