ಮೈಸೂರು: ಇಬ್ಬರು ಹೆಣ್ಣು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಮೃತರನ್ನು 48 ವರ್ಷದ ಮಹದೇವಸ್ವಾಮಿ, 35 ವರ್ಷದ ಅನಿತಾ, ಪುತ್ರಿಯರಾದ 17 ವರ್ಷದ ಚಂದ್ರಕಲಾ ಮತ್ತು 15 ವರ್ಷದ ಧನಲಕ್ಷ್ಮೀ ಎಂದು ಎಂದು ಹೇಳಲಾಗಿದೆ. ಮೃತ ಮಹದೇವಸ್ವಾಮಿ ಆರ್‌ಎಂಸಿಯಲ್ಲಿ (RMC Yard) ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮಹದೇವ ಸ್ವಾಮಿ ಶವ ಹಾಲ್‌ನಲ್ಲಿ ಪತ್ತೆಯಾದರೆ ಅನಿತಾ ಅವರ ಮೃತದೇಹ ಕುರ್ಚಿ ಮೇಲಿದ್ದು ದೊಡ್ಡ ಮಗಳು ಚಂದ್ರಕಲಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ ಚಿಕ್ಕ ಮಗಳು ಧನಲಕ್ಷ್ಮಿ ಮೃತದೇಹ ರೂಮಿನಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.
ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆಯಿಂದ ಕೊಳೆತ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಬಾಡಿಗೆ ಮನೆಯಲ್ಲೇ ಕುಟುಂಸ್ಥರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್​ ಆಯುಕ್ತ ರಮೇಶ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement