ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸಾಂವಿಧಾನಿಕ ಹುದ್ದೆ ನೀಡಿದ ಸರ್ಕಾರ…!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದಿಂದ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ, ಕೆಡಿಪಿ ಸದಸ್ಯರಾನ್ನಾಗಿಯೂ ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ‘ಕಳೆದ 15 ದಿನದ ಹಿಂದೆಯೇ ನನ್ನ ನೇಮಕಾತಿ ಆದೇಶ ಆಗಿದೆ. ಆದೇಶ ಪತ್ರವನ್ನ ನಿಮಗೆ ಕಳುಹಿಸಿಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.ವರುಣಾ ಕ್ಷೇತ್ರದ ಜನರ ಸಮಸ್ಯೆ ಆಲಿಸುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆ.
‘ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಯತೀಂದ್ರ ಭಾಗವಹಿಸುತ್ತಿದ್ದಾರೆ’ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗುತ್ತಿದ್ದಂತೆ ಎಚ್ವೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. 15 ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಇದೀಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ವತಃ ಯತೀಂದ್ರ ಅವರೇ ತಮಗೆ ಸಾಂವಿಧಾನಿಕ ಹುದ್ದೆ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ. ಪಕ್ಷ ಸೂಚಿಸಿದರೆ ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುತ್ತೇನೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement