ಮೂವರು ಐಪಿಎಸ್‌ ʼಅಧಿಕಾರಿ’ಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಡೈರೆಕ್ಟರೇಟ್ ಆಫ್‌ ಸಿವಿಲ್ ರೈಟ್ಸ್ ಎನ್ಫೋರ್ಸಮೆಂಟ್ ಎಸ್ಪಿಯಾಗಿದ್ದ ಜಿ.ಸಂಗೀತಾ ಅವರನ್ನು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಲೋಕೇಶ ಭರಮಪ್ಪ ಜಗಲಾಸರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ನಗರದ ಕ್ರೈಂ ಹಾಗೂ ಸಂಚಾರ ಡಿಸಿಪಿಯಾಗಿದ್ದ ಗೋಪಾಲ್ ಎಂ. ಬೈಕೋಡ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರ ವರೆಗೆ ಇಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement