ಕುಮಟಾ: ಹೆಗಡೆಯಲ್ಲಿ ಅತಿ ದೊಡ್ಡ ಬಿಳಿ ಹೆಬ್ಬಾವು ಪ್ರತ್ಯಕ್ಷ – ರಕ್ಷಣೆ

ಕುಮಟಾ : ಸಮೀಪದ ಹೆಗಡೆ ಗ್ರಾಮದ ಗಾಂಧಿ ನಗರದ ಮನೆಯಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ರಕ್ಷಣೆ ಮಾಡಲಾಗಿದೆ.
ಆರ್ ಟಿ ಒ ಕಚೇರಿ ಹೋಮ್ ಗಾರ್ಡ್ ಗಣೇಶ ಮುಕ್ರಿ ಅವರ ಮನೆಯ ಅಂಗಳದಲ್ಲಿ ಕಾಣಿಸಕೊಂಡ ಹೆಬ್ಬಾವನ್ನು ಪವನ್ ನಾಯ್ಕ ರಕ್ಷಣೆ ಮಾಡಿದ್ದಾರೆ. ಗಣೇಶ ಮುಕ್ರಿ ಅವರು ಉರಗ ತಜ್ಞ ಪವನ್‌ ನಾಯ್ಕ ಅವರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ 12 ಗಂಟೆಗೆ ಸ್ಥಳಕ್ಕೆ ತೆರಳಿದ ಪವನ್‌ ನಾಯ್ಕ ರಕ್ಷಣೆ ಮಾಡಿದ್ದಾರೆ. ಕಳೆದ ವರ್ಷವಷ್ಟೇ ಮಿರ್ಜಾನ್ ನಲ್ಲಿ ಸಣ್ಣ ಗಾತ್ರದ ಬಿಳಿ ಹೆಬ್ಬಾವು ಕಾಣಿಸಿಕೊಂಡಿದ್ದು ರಾತ್ರಿ ವೇಳೆ ಪವನ್ ನಾಯ್ಕ ಹೋಗಿ ರಕ್ಷಣೆ ಮಾಡಿದ್ದರು. ಈಗ ಬಹುತೇಕ ಅದರ ಮೂರು ಪಟ್ಟು ದೊಡ್ಡ ಗಾತ್ರದ ಬಿಳಿ ಹೆಬ್ಬಾವನ್ನು ಹೆಗಡೆಯಲ್ಲಿ ರಕ್ಷಣೆ ಮಾಡಿದ್ದಾರೆ.
ಇಂತಹ ಬಿಳಿ ಹೆಬ್ಬಾವು ಕರ್ನಾಟಕದಲ್ಲೇ ಮೂರನೇ ಬಾರಿ ರಕ್ಷಣೆ ಮಾಡಲಾಗಿದ್ದು, ಅದರಲ್ಲಿ ಎರಡು ಸಲ ಕುಮಟಾ ತಾಲೂಕಿನಲ್ಲೇ ಅದು ಕಂಡುಬಂದಿದ್ದು ವಿಶೇಷವಾಗಿದೆ.
ರಾತ್ರಿಯಾಗಿದ್ದರಿಂದ ಮಂಗಳವಾರ ಬೆಳಿಗ್ಗೆ ಕುಮಟಾ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದ್ದು. ಮೈಮೇಲೆ ಸಣ್ಣ ಪುಟ್ಡ ಗಾಯಗಳಿರುವುದರಿಂದ ಮೈಸೂರು ಮೃಗಾಲಯಕ್ಕೆ ಕಳುಹಿಸಲಾಗಿದೆ. ಡಿಎಫ್ ಒ ರವಿಶಂಕರ್, ಎಸಿಎಫ್ ಜಿ ಲೋಹಿತ, ಆರ್ ಎಫ್‌ ಒ ಎಸ್ ಟಿ ಪಟಗಾರ, ಡಿ ಆರ್ ಎಫ್ ಒ ಹೂವಣ್ಣ ಗೌಡ ಸ್ಥಳದಲ್ಲಿದ್ದರು. ಹಾವಿನ ಛಾಯಾಗ್ರಹಣವನ್ನು ಪ್ರಸಿದ್ದ ಛಾಯಾಗ್ರಾಹಕರಾದ ಗೋಪಿ ಜೋಲಿ ಅವರು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement