ಬೆಂಗಳೂರು: ಯುವ ವಿಜ್ಞಾನಿಯ ಕಾರುಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಯುವ ವಿಜ್ಞಾನಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜ್ಞಾನಿ ಅಶುತೋಷ್ ಸಿಂಗ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ವತಮ್ಮ ಕ್ವಿಡ್ ಕಾರಿನಲ್ಲಿ ರಾವತ್ತನಹಳ್ಳಿ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗ ಬೆಂಗಳೂರಿನ ರಾವತ್ತನಹಳ್ಳಿ ಮುಖ್ಯರಸ್ತೆಯಲ್ಲಿ ಆಗಸ್ಟ್ 24 ರ ರಾತ್ರಿ 12:45 ಸುಮಾರಿನಲ್ಲಿ ಸ್ಥಳೀಯ ದುಷ್ಕರ್ಮಿಗಳು ತಮ್ಮ ಕಾರಿನ ಮೇಲೆ ಹಲ್ಲೆ ಮಾಡಿ ಕಲ್ಲು ಎಸೆದಿದ್ದಾರೆ  ಎಂದು ಅವರು ಹೇಳಿದ್ದಾರೆ.

ಅವರು ನನ್ನ ಕಾರನ್ನು ನಿಲ್ಲಿಸಲು ಪ್ರಯತ್ನಿಸಿದರು. ಮಚ್ಚು ಲಾಂಗ್ ನಿಂದ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದರು. ಕಾರಿನ ಹಿಂಭಾಗದ ಗಾಜು ಒಡೆದು ಹಾಕಿದರು ಎಂದು ಹೇಳಿದ್ದಾರೆ. ಈ ಸಂಬಂಧ ತಾವು ಪೊಲೀಸ್ ದೂರು ನೀಡಿದ್ದು, ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ಎಫ್ ಐಆರ್ ದಾಖಲಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 24ರ ತಡರಾತ್ರಿ ನಡೆದಿರುವ ಘಟನೆ ಸಂಬಂಧ ದೂರು ಪಡೆಯಲಾಗಿದೆ. ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement